ಸಾರಿಗೆ ಸಂಜೀವಿನಿ ತಂತ್ರಾಂಶದ ಅಭಿವೃದ್ಧಿ ಹಾಗೂ ಅನುಷಾ್ಠನಕ್ಕಾಗಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥಗೆ ರಾಷ್ಟ್ರೀಯ ಪ್ರಶಸ್ತಿ

varthajala
0

 ಹುಬ್ಬಳ್ಳಿ / ಬೆಂಗಳೂರು : ಡಿಸೆಂಬರ್ 16 ರಂದು ಗೌವರ್ನೆನ್ಸ್ ನೌ ವತಿಯಿಂದ ನವದೆಹಲಿಯ ಹೊಟೇಲ್ ಇರೋಸ್, ಸಭಾಂಗಣದಲ್ಲಿ ಆಯೋಜಿಸಲಾಗಿದ್ದ 6ನೇ ಡಿಜಿಟಲ್ ಟ್ರಾನ್ಸ್ ಫಾರ್ಮೇಶನ್ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ Innovative Digital Health Services and Public Health Data Analytics ವಿಭಾಗದಡಿಯಲ್ಲಿ ಸಾರಿಗೆ ಸಂಜೀವಿನಿ ತಂತ್ರಾಂಶದ ಅಭಿವೃದ್ಧಿ ಹಾಗೂ ಅನುμÁ್ಠನಕ್ಕಾಗಿ ರಾಷ್ಟ್ರೀಯ ಪ್ರಶಸ್ತಿ ಲಭಿಸಿರುತ್ತದೆ.

 ಕಾರ್ಯಕ್ರಮದಲ್ಲಿ ಸಂಸ್ಥೆಯ ಉಪಮುಖ್ಯ ಗಣಕ ವ್ಯವಸ್ಥಾಪಕರಾದ ಶ್ರೀನಾಥ.ಜಿ ಹಾಗೂ ಸಾರ್ವಜನಿಕ ಸಂಪರ್ಕಾಧಿಕಾರಿ \ ನವೀನಕುಮಾರ ತಿಪ್ಪಾ ರವರು ಸಂಸ್ಥೆಯ ಪರವಾಗಿ ಭಾಗವಹಿಸಿ ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಕೈಲಾಶ ಅಧಿಕಾರಿ, ವ್ಯವಸ್ಥಾಪಕ ನಿರ್ದೇಶಕರು, ಗೌವರ್ನೆನ್ಸ್ ನೌ ಅವರಿಂದ ಪ್ರಶಸ್ತಿಯನ್ನು ಸ್ವೀಕರಿಸಿದರು. ತಂತ್ರಾಂಶ ಅಭಿವೃದ್ಧಿ ಮತ್ತು ಅನುμÁ್ಠನಕ್ಕಾಗಿ ರಾಷ್ಟ್ರಮಟ್ಟದಲ್ಲಿ ಗಮನಾರ್ಹ ಸಾಧನೆ ತೋರಿದ ಸಾರ್ವಜನಿಕ ಸ್ವಾಮ್ಯದ ಸಂಸ್ಥೆಗಳಿಗೆ ಕೊಡಲಾಗುವ ಈ ಪ್ರಶಸ್ತಿಯನ್ನು ಪಡೆದಿರುವುದಕ್ಕೆ ಸಂಸ್ಥೆಯ ಮಾನ್ಯ ಅಧ್ಯಕ್ಷರಾದ ಭರಮಗೌಡ (ರಾಜು) ಅ ಕಾಗೆ, ಮಾನ್ಯ ಉಪಾಧ್ಯಕ್ಷರಾದ ಸುನೀಲ್ ಹಣಮನ್ನವರ ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಶ್ರೀಮತಿ ಪ್ರಿಯಾಂಗಾ.ಎಂ. ಅವರು ಹರ್ಷವನ್ನು ವ್ಯಕ್ತಪಡಿಸಿದ್ದಾರೆ. ಈ ಪ್ರಶಸ್ತಿ ಪಡೆಯಲು ಕಾರಣರಾಗಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಅಭಿನಂದನೆಯನ್ನು ಸಲ್ಲಿಸಿದ್ದಾರೆ.

Post a Comment

0Comments

Post a Comment (0)