ಬೆಂಗಳೂರು : ಅಕ್ರಮವಾಗಿ ಮದ್ಯ ಮಾರಾಟ ಮಾಡುವುದನ್ನು ತಡೆಗಟ್ಟಲು ಇಲಾಖಾಧಿಕಾರಿಗಳು ವಲಯ ವ್ಯಾಪ್ತಿಯ ರೂಟ್ ಗಳಲ್ಲಿ ನಿರಂತರವಾಗಿ ಗಸ್ತು ನಡೆಸಿ, ಸದರಿ ಗಸ್ತಿನ ಸಮಯದಲ್ಲಿ ಮತ್ತು ಸಾರ್ವಜನಿಕರಿಂದ ವಿಶೇಷವಾಗಿ ಮಹಿಳೆ/ಮಹಿಳಾ ಸಂಘಗಳಿಂದ ದೂರು ಸ್ವೀಕೃತವಾದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವ ಸ್ಥಳಗಳ ಮೇಲೆ ದಾಳಿ ನಡೆಸಿ, ಅಕ್ರಮಗಳು ಕಂಡುಬಂದಲ್ಲಿ ಅಬಕಾರಿ ಕಾಯ್ದೆ ಮತ್ತು ನಿಯಮಗಳನುಸಾರ ಪ್ರಕರಣಗಳನ್ನು ದಾಖಲಿಸಲಾಗುತ್ತಿದೆ ಎಂದು ತಿಳಿಸಿದರು.
ಇಂದು ವಿಧಾನಸಭಾ ಪ್ರಶ್ನೋತ್ತರ ವೇಳೆಯಲ್ಲಿ ರಾಯಭಾಗ ಕ್ಷೇತ್ರದ ಶಾಸಕ ಐಹೊಳೆ ದುರ್ಯೋಧನ ಮಹಾಲಿಂಗಪ್ಪ ಇವರ ಪ್ರಶ್ನೆಗೆ ಉತ್ತರಿಸಿದರು. ರಾಯಭಾಗ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಕ್ರಮ ಮದ್ಯ ಮಾರಾಟ ಮಾಡಿದವರ ವಿರುದ್ಧ ಕಳೆದ ಎರಡು ವರ್ಷಗಳಲ್ಲಿ 357 ದಾಳಿಗಳನ್ನು ನಡೆಸಿ, 18 ಜಾಮೀನಿಯವಲ್ಲದ ಪ್ರಕರಣಗಳನ್ನು ಹಾಗೂ ಜಾಮೀನಿಯ ದಂಡ ವಿಧಿಸಬಹುದಾದದ ಕಲಂ 15ಎ ರ ಒಟ್ಟು 295 ಪ್ರಕರಣಗಳನ್ನು ಕರ್ನಾಟಕ ಅಬಕಾರಿ ಕಾಯ್ದೆ ಅನ್ವಯ ದಾಖಲಿಸಲಾಗಿರುತ್ತದೆ. ಇದೇ ಅವಧಿಯಲ್ಲಿ 322 ಆರೋಪಿತರನ್ನು ದಸ್ತಗಿರಿಗೊಳಪಡಿಸಿ, ಒಟ್ಟು 370 ಲೀಟರ್ ಮದ್ಯ ಮತ್ತು 07 ವಾಹನಗಳನ್ನು ವಶಪಡಿಸಿಕೊಳ್ಳಲಾಗಿರುತ್ತದೆ ಎಂದರು.Post a Comment
0Comments