ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಶೌಚಾಲಯ ನಿರ್ಮಾಣಕ್ಕೆ ಅನುದಾನ ಬಿಡುಗಡೆ- ಶಿಕ್ಷಣ ಸಚಿವ ಎಸ್.ಮಧುಬಂಗಾರಪ್ಪ

varthajala
0

 ಬೆಂಗಳೂರು  : 2025-26ನೇ ಸಾಲಿನ ರಾಜ್ಯ ವಲಯ ಮುಂದುವರೆದ ಯೋಜನೆಯಡಿ ಸರ್ಕಾರಿ ಶಾಲಾ ಶೌಚಾಲಯ ನಿರ್ಮಾಣಕ್ಕಾಗ ರೂ.9000.00 ಲಕ್ಷಗಳ ಅನುದಾನ ನಿಗದಿಯಾಗಿದ್ದು, ರೂ. 6328 ಲಕ್ಷಗಳ ಅನುದಾನದಲ್ಲಿ ಶೌಚಾಲಯ ನಿರ್ಮಾಣ ಕಾರ್ಯಕ್ಕೆ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದರು.ಇಂದು ವಿಧಾನಸಭೆಯ ಕಲಾಪದ ಪ್ರಶ್ನೋತ್ತರ ವೇಳೆಯಲ್ಲಿ ಕುಂದಗೋಳ ವಿಧಾನಸಭೆಯ ಸದಸ್ಯರ ಪ್ರಶ್ನೆಗೆ ಉತ್ತರಿಸಿದ ಸಚಿವರು ಕುಂದಗೋಳ ಕ್ಷೇತ್ರದ 2 ಸರ್ಕಾರಿ ಶಾಲೆಗಳಿಗೆ ರೂ. 8.00ಲಕ್ಷಗಳ ಅನುದಾನದಲ್ಲಿ ಶೌಚಾಲಯಕ್ಕೆ ಮಂಜೂರು ಮಾಡಲಾಗಿದೆ.

ಬಾಕಿ ರೂ. 2671.00ಲಕ್ಷಗಳ ಅನುದಾನದಲ್ಲಿ ಅಗತ್ಯತೆ ಮತ್ತು ಆದ್ಯತೆಯನುಸಾರ ಶೌಚಾಲಯ ನಿರ್ಮಾಣಕ್ಕೆ ಕ್ರಿಯಾ ಯೋಜನೆ ಸಿದ್ದಪಡಿಸಲಾಗಿದೆ ಎಂದರು. ಸಮಗ್ರ ಶಿಕ್ಷಣ-ಕರ್ನಾಟಕ ಯೋಜನೆಯಡಿ 2025-26ನೇ ಸಾಲಿನಲ್ಲಿ ಶಾಲಾ ಶೌಚಾಲಯ ನಿರ್ಮಾಣಕ್ಕಾಗಿ ರೂ. 1272.00 ಲಕ್ಷಗಳ ಅನುದಾನ ನಿಗದಿಯಾಗಿದ್ದು, ಅಗತ್ಯತೆ ಮತ್ತು ಆದ್ಯತೆಯನುಸಾರ ಕ್ರಿಯಾ ಯೋಜನೆ ಸಿದ್ದಪಡಿಸಿದ್ದು ಅನುಮೋದನೆಗೊಳ್ಳುವ ಪ್ರಕ್ರಿಯೆಯಲ್ಲಿದೆ ಎಂದು ತಿಳಿಸಿದರು.

Post a Comment

0Comments

Post a Comment (0)