ಕೃತಕ ಕಾಲು ಜೋಡಣೆ ಸೌಲಭ್ಯ ಪಡೆಯಲು ಮಾನದಂಡಗಳ ಸರಳೀಕರಣ –ಸಚಿವೆ ಲಕ್ಷ್ಮೀ ಹೆಬ್ಬಾಳಕರ್

varthajala
0

 ಬೆಂಗಳೂರು : ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ಸಾಧನ ಸಲಕರಣೆ ಯೋಜನೆಯಡಿ ವಿಕಲಚೇತನರಿಗೆ ಅವಶ್ಯಕವಾಗಿರುವ ಸಾಧನ ಸಲಕರಣೆಗಳನ್ನು ನೀಡಲಾಗುತ್ತಿದ್ದು ಈ ಯೋಜನೆಯಡಿ ವಿಕಲಚೇತನ ವ್ಯಕ್ತಿಗಳು ಹೆಚ್ಚಿನ ಸೌಲಭ್ಯ ಪಡೆಯಲು ಅನುವಾಗುವಂತೆ ಮಾನದಂಡಗಳನ್ನು ಮಾರ್ಪಡಿಸಿ ಆದೇಶಿಸಲಾಗಿದೆ. ಈ ಯೋಜನೆಯಡಿ ಅಂಗವಿಕಲ ಅಭ್ಯರ್ಥಿಗಳು ರಾಜ್ಯದಲ್ಲಿ 7 ವರ್ಷಗಳಿಂದ ವಾಸ ಮಾಡುತ್ತಿರುವ ಬಗ್ಗೆ ವಾಸ ಸ್ಥಳ ದೃಢೀಕರಣ ಪ್ರಮಾಣ ಪತ್ರ ಹಾಗೂ ಆದಾಯ ಮಿತಿಯನ್ನು ನಗರ ವಾಸಿಗಳಾಗಿದ್ದಲ್ಲಿ 2.50 ಲಕ್ಷಗಳು ಮತ್ತು ಗ್ರಾಮೀಣ ನಿವಾಸಿಗಳಾಗಿದ್ದಲ್ಲಿ 2.00ಲಕ್ಷಗಳ ಮಿತಿಯನ್ನು ನಿಗದಿಪಡಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು. 

ಇಂದು ವಿಧಾನಸಭೆಯ ಕಲಾಪದದಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಸದಸ್ಯರಾದ ಶ್ರೀವತ್ಸ ಟಿ.ಎಸ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಇಲಾಖೆ ಯೋಜನೆಯಾದ 21 ಜಿಲ್ಲಾ ಅಂಗವಿಕಲರ ಪುನರ್ವಸತಿ ಕೇಂದ್ರವನ್ನು ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ವೈದ್ಯಕೀಯ ಮಹಾಮಂಡಳಿ ಹಾಗೂ ಸ್ವಯಂ ಸೇವಾ ಸಂಸ್ಥೆಗಳ ಮೂಲಕ ನಡೆಸಲಾಗುತ್ತಿದ್ದು, ಈ ಕೇಂದ್ರಗಳಲ್ಲಿ ವಿಕಲಚೇನರಿಗೆ ಅಗತ್ಯವಿರುವ ವೈದ್ಯಕೀಯ ಸೇವೆ, ವೃತ್ತಿ ಚಿಕಿತ್ಸೆ, ವಿವಿಧ ರೀತಿಯ ಸಾಧನ ಸಲಕರಣೆಗಳನ್ನು, ಕೃತಕ ಕಾಲುಗಳನ್ನು ತಯಾರಿಸಿ ಒದಗಿಸಲಾಗುತ್ತಿದೆ.
ಕೇಂದ್ರ ಸರ್ಕಾರದ ಅಲಿಂಕೋ ಸಂಸ್ಥೆಯ ವತಿಯಿಂದಲೂ ಸಹ ಜಿಲ್ಲೆಗಳಲ್ಲಿ ಶಿಬಿರಗಳನ್ನು ಏರ್ಪಡಿಸಿ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಸಹಯೋಗದೊಂದಿಗೆ ವಿಕಲಚೇತನರನ್ನು ಗುರುತಿಸಿ ಉಚಿತವಾಗಿ ಅಗತ್ಯವಿರುವ ಕೃತಕ ಅಂಗಾಂಗಗಳನ್ನು ವಿತರಿಸಲಾಗುತ್ತಿದೆ ಎಂದು ತಿಳಿಸಿದರು.

Post a Comment

0Comments

Post a Comment (0)