ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ) ಹೊರ ತಂದಿರುವ ವಾರ್ಷಿಕ ಕ್ಯಾಲೆಂಡರ್‌ನ್ನು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಡುಗಡೆ ಮಾಡಿ, ಶುಭ ಹಾರೈಸಿದರು.ವರ್ಷದ ಮೊದಲ ಕ್ಯಾಲೆಂಡರ್‌ನ್ನು ಮುಖ್ಯಮಂತ್ರಿಗಳಿಗೆ ನೀಡಿದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಪ್ರತಿ ವರ್ಷವೂ ಕ್ಯಾಲೆಂಡರ್‌ಗಳನ್ನು ಹೊರತರಲಾಗುತ್ತಿದ್ದು, ಕಳೆದ ವರ್ಷವೂ ತಾವೇ ಬಿಡುಗಡೆ ಮಾಡಿದ್ದೀರಿ ಎಂದು ನೆನಪಿಸಿದರು.ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲೂೃಜೆ ವತಿಯಿಂದ ಹೂಗುಚ್ಛ ನೀಡಿ ಹೊಸ ವರ್ಷದ ಶುಭಾಶಯಗಳನ್ನು ಕೋರಲಾಯಿತು.
ಈ ಸಂದರ್ಭದಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ, ಖಜಾಂಚಿ ವಾಸುದೇವ ಹೊಳ್ಳ, ಎನ್.ರವಿಕುಮಾರ್ ಟೆಲೆಕ್ಸ್ ಮತ್ತಿತರರು ಹಾಜರಿದ್ದರು.
ಶುಭ ಹರಸಿದ ಕೆ.ವಿ.ಪ್ರಭಾಕರ್: ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರಿಗೆ ಕೆಯುಡಬ್ಲೂಜೆ ಹೊರ ತಂದಿರುವ ವಾರ್ಷಿಕ ಕ್ಯಾಲೆಂಡರ್‌ನ್ನು ಪತ್ರಕರ್ತರ ಸಮ್ಮುಖದಲ್ಲಿ ನೀಡಲಾಯಿತು. ಇದೇ ಸಂದರ್ಭದಲ್ಲಿ ಅವರು ಶುಭ ಹಾರೈಸಿದರು.
ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ, ಖಜಾಂಚಿ ವಾಸುದೇವ ಹೊಳ್ಳ, ಎನ್.ರವಿಕುಮಾರ್ ಟೆಲೆಕ್ಸ್, ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಶಿವಕುಮಾರ ಬೆಳ್ಳಿತಟ್ಟೆ, ಹಿರಿಯ ಪತ್ರಕರ್ತರಾದ ಚಿದಾನಂದ ಪಟೇಲ್, ಮಾರುತಿ ಪಾವಗಡ, ದೇವರಾಜು, ಅಪ್ಪಣ್ಣ ಮತ್ತಿತರರು ಇದ್ದರು.