ಬೆಂಗಳೂರು ಭೇಟಿಗಾಗಿ ಆಗಮಿಸಿದ ಫೆಡರಲ್ ರಿಪಬ್ಲಿಕ್ ಆಫ್ ಜರ್ಮನಿಯ ಚಾನ್ಸೆಲರ್ ಫೆಡ್ರಿಕ್ ಮೆರ್ಜ್ ಆತ್ಮೀಯವಾಗಿ ಸ್ವಾಗತಿಸಿದ ಭಾರೀ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್

varthajala
0

 ಬೆಂಗಳೂರು : ಬೆಂಗಳೂರು ಭೇಟಿ ಸಂಬಂಧ ಫೆಡರಲ್ ರಿಪಬ್ಲಿಕ್ ಆಫ್ ಜರ್ಮನಿಯ ಚಾನ್ಸೆಲರ್ ಫೆಡ್ರಿಕ್ ಮೆರ್ಜ್ ಅವರು ತಮ್ಮ ನಿಯೋಗದೊಂದಿಗೆ ಇಂದು ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

 ಫೆಡರಲ್ ರಿಪಬ್ಲಿಕ್ ಆಫ್ ಜರ್ಮನಿಯ ಚಾನ್ಸಲರ್ ಮತ್ತು ಅವರ ನಿಯೋಗದವರನ್ನು ಬಾರೀ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರಾದ ಎಂ.ಬಿ.ಪಾಟೀಲ್ ಅವರು ಆತ್ಮೀಯವಾಗಿ ಸ್ವಾಗತಿಸಿದರು. 

ಈ ಸಮಯದಲ್ಲಿ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಾರ್ಯದರ್ಶಿಗಳಾದ ಡಾ. ಕೆ.ಜಿ ಜಗದೀಶ, ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಿ. ಜಗದೀಶ್, ಬೆಂಗಳೂರು ನಗರ

 ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್, ಬೆಂಗಳೂರು ಪ್ರಾದೇಶಿಕ ಪಾಸ್ ಪೋರ್ಟ್ ಅಧಿಕಾರಿಗಳು ಹಾಗೂ ಜರ್ಮನಿ ಕಾನ್ಸೂಲೇಟ್ ಜನರಲ್ ನವದೆಹಲಿ ಕಚೇರಿಯ ಅಧಿಕಾರಿಗಳು ಸೇರಿದಂತೆ ಇತರೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. 

ಫೆಡರಲ್ ರಿಪಬ್ಲಿಕ್ ಆಫ್ ಜರ್ಮನಿಯ ಚಾನ್ಸಲರ್ ಮತ್ತು ಅವರ ನಿಯೋಗವು ಇಂದು ಬೆಂಗಳೂರಿನ ವಿವಿಧ ಸಂಸ್ಥೆಗಳಿಗೆ ಭೇಟಿ ನೀಡಿ ಇಂದು ಸಂಜೆ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಾಪಸ್ಸಾಗಲಿದ್ದಾರೆ.

Post a Comment

0Comments

Post a Comment (0)