ಹಿರಿಯ ರಾಜಕಾರಣಿ ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನಕ್ಕೆ ಮುಖ್ಯಮಂತ್ರಿಗಳಿಂದ ಸಂತಾಪ

varthajala
0

 ಬೆಂಗಳೂರು : ಮಾಜಿ ಸಚಿವರು, ನಾಡಿನ ಹಿರಿಯ ರಾಜಕಾರಣಿಗಳು ಆದ ಭೀಮಣ್ಣ ಖಂಡ್ರೆಯವರ ನಿಧನದಿಂದ ದುಃಖಿತನಾಗಿದ್ದೇನೆ. ಶರಣ ಚಿಂತನೆಗಳ ನೆರಳಂತೆ ಬಾಳಿದ ಧೀಮಂತ ನಾಯಕನ ನಿಧನದಿಂದ ನಾಡಿಗೆ ತುಂಬಲಾರದ ನಷ್ಟವಾಗಿದೆ. 

 ಮಹಾತ್ಮಗಾಂಧಿಯವರ ನಾಯಕತ್ವದಲ್ಲಿ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿದ್ದ ಭೀಮಣ್ಣ ಖಂಡ್ರೆಯವರು ಬಳಿಕ ಕರ್ನಾಟಕ ಏಕೀಕರಣ ಚಳವಳಿಯಲ್ಲೂ ಮುಂಚೂಣಿಯಲ್ಲಿ ಗುರುತಿಸಿಕೊಂಡವರು. ಬೀದರ್ ಜಿಲ್ಲೆಯನ್ನು ಕರ್ನಾಟಕದಲ್ಲೇ ಉಳಿಸಿಕೊಳ್ಳಲು ಟೊಂಕಕಟ್ಟಿ ನಿಂತು, ಆ ಪ್ರಯತ್ನದಲ್ಲಿ ಕೂಡ ಸಫಲರಾದ ಹುಟ್ಟು ಹೋರಾಟಗಾರ. ಭೀಮಣ್ಣ ಖಂಡ್ರೆಯವರ ಬದುಕಿನ ಹೆಜ್ಜೆಗಳು ಈ ಮಣ್ಣಿನಲ್ಲಿ ಚಿರಸ್ಥಾಯಿ. ಬದುಕು ಕೊಟ್ಟ ಎಲ್ಲಾ ಅವಕಾಶಗಳನ್ನು ಸದ್ಬಳಕೆ ಮಾಡಿಕೊಂಡು ಸಮಾಜಕ್ಕಾಗಿ ದುಡಿದ ಸಾರ್ಥಕ ಜೀವಕ್ಕೆ ಅಂತಿಮ ನಮನಗಳು. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬ ಸದಸ್ಯರು ಹಾಗೂ ಅಪಾರ ಅಭಿಮಾನಿ ಬಳಗಕ್ಕೆ ಈ ನೋವು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಅವರು ತಿಳಿಸಿದ್ದಾರೆ.

Post a Comment

0Comments

Post a Comment (0)