ಬೆಂಗಳೂರು : ಅಜಿತ್ ಪವಾರ್ ಅವರ ಸಾವು ಆಘಾತಕಾರಿ. ಅವರ ಸಾವಿನ ಸುದ್ದಿ ಕೇಳಿ ನನಗೆ ಗಾಬರಿಯಾಯಿತು. ರಾಜಕಾರಣಿಗಳಾದ ನಾವುಗಳು ಅತ್ಯಂತ ಎಚ್ಚರಿಕೆಯಿಂದ ಇರಬೇಕು. ಆಚೀಚೆ ಪ್ರಯಾಣ ಮಾಡುವಾಗ ಹುμÁರಾಗಿ ಇರಬೇಕು. ಹೀಗೆ ಅನೇಕ ನಾಯಕರನ್ನು ನಾವು ಕಳೆದುಕೊಂಡಿದ್ದೇವೆ" ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
ಇಂದು ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಉಪ ಮುಖ್ಯಮಂತ್ರಿಗಳು, ಅತ್ಯಂತ ಪ್ರಗತಿಪರ ಆಲೋಚನೆ ಹೊಂದಿದ್ದಂತಹ ನಾಯಕ ಅಜಿತ್ ಪವಾರ್ ಅವರು. ಎಲ್ಲಾ ಕೆಲಸಗಳಿಗೂ ಸಹಕಾರ ಕೊಡುತ್ತಿದ್ದರು ಎಂದು ಮೊನ್ನೆಯಷ್ಟೆ ಮಹಾರಾಷ್ಟ್ರ ಮುಖ್ಯಮಂತ್ರಿಯವರು ಹೇಳಿದ್ದರು. ಅವರ ಆತ್ಮಕ್ಕೆ ಶಾಂತಿ ದೊರಕಲಿ. ಅವರ ಕುಟುಂಬ ವರ್ಗ ಹಾಗೂ ಬೆಂಬಲಿಗರಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ಆ ಭಗವಂತ ನೀಡಲಿ ಎಂದು ಸಂತಾಪ ವ್ಯಕ್ತಪಡಿಸಿದ್ದಾರೆ.Post a Comment
0Comments