ಶಿಕ್ಷಣ ಸಂಸ್ಥೆಗಳು ಮತ್ತು ವಿದ್ಯಾರ್ಥಿ ನಿಲಯಗಳಲ್ಲಿ ಮಕ್ಕಳ ಮೇಲೆ ಲೈಂಗಿಕ ಮತ್ತು ದೈಹಿಕ ದೌರ್ಜನ್ಯ ತಡೆಗಟ್ಟಲು ಅಗತ್ಯ ಕ್ರಮ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

varthajala
0

 ಬೆಂಗಳೂರು: ಸರ್ಕಾರಿ ಮತ್ತು ಸರ್ಕಾರೇತರ ಶಿಕ್ಷಣ ಸಂಸ್ಥೆಗಳು ಮತ್ತು ವಿದ್ಯಾರ್ಥಿ ನಿಲಯಗಳಲ್ಲಿ ಮಕ್ಕಳ ಮೇಲೆ ಲೈಂಗಿಕ ಮತ್ತು ದೈಹಿಕ ದೌರ್ಜನ್ಯ ತಡೆಗಟ್ಟಲು ಸರ್ಕಾರವು ಅಗತ್ಯ ಕ್ರಮಗಳನ್ನು ಕೈಗೊಂಡಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತರನ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.

ಇಂದು ವಿಧಾನಸಭೆಯ ಕಲಾಪದ ಪ್ರಶ್ನೋತ್ತರ ವೇಳೆಯಲ್ಲಿ ಮಂಗಳೂರು ನಗರ ಉತ್ತರ ಕ್ಷೇತ್ರದ ಸದಸ್ಯ ಡಾ: ಭರತ್ ಶೆಟ್ಟಿ ಇವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮಕ್ಕಳ ಸಹಾಯವಾಣಿ 1098 ಮಕ್ಕಳ ಸುರಕ್ಷತೆಗಾಗಿ ಕಾರ್ಯನಿರ್ವಹಿಸುತ್ತಿದೆ. ಸಂಕಷ್ಟದಲ್ಲಿರುವ ಮಗುವಿನ ಬಗ್ಗೆ ಯಾವುದೇ ಸಮಯದಲ್ಲಿ ಕರೆ ಸ್ವೀಕೃತವಾದರೂ ತಕ್ಷಣ ಮಗುವನ್ನು ರಕ್ಷಿಸಲು ಸಂಬಂಧಿಸಿದ ಅಧಿಕಾರಿಗಳು ಕಾರ್ಯ ಪ್ರವೃತ್ತರಾಗುತ್ತಾರೆ. ಈ ಕುರಿತು ವ್ಯಾಪಕ ಪ್ರಚಾರ ಕಾರ್ಯಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಕೈಗೊಳ್ಳುತ್ತಿದ್ದೇವೆ ಎಂದರು. 
ಮಹಿಳೆಯರ ಮತ್ತು ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ತಕ್ಷಣಕ್ಕೆ ನೆರವಾಗಲು ಇಲಾಖೆಯಿಂದ “ಅಕ್ಕಪಡೆ”ಯನ್ನು ರಚಿಸಿ ಕಾರ್ಯರೂಪಕ್ಕೆ ತರಲಾಗಿದೆ. ಪೆÇೀಕ್ಸೋ ಕಾಯ್ದೆಯಡಿ ಸಂತ್ರಸ್ಥರಿಗೆ ನೆರವಾಗಲು ಎನ್‍ಸಿಪಿಸಿಆರ್ ಮಾರ್ಗಸೂಚಿಯನ್ವಯ ರಾಜ್ಯಾದ್ಯಂತ 161 ಬೆಂಬಲ ವ್ಯಕ್ತಿಗಳನ್ನು ನೇಮಿಸಲಾಗಿದೆ ಎಂದರು. 
ರಾಜ್ಯದ ಎಲ್ಲಾ ಶಾಲಾ-ಕಾಲೇಜು ವಸತಿ ನಿಲಯ ಹಾಗೂ ತರಬೇತಿ ಸಂಸ್ಥೆಗಳಲ್ಲಿ ಮಕ್ಕಳ ಹಕ್ಕುಗಳು ಬಾಲಗರ್ಭಿಣಿ ಪೆÇೀಕ್ಸೋ ಬಾಲ್ಯ ವಿವಾಹ ಹಾಗೂ ಮಕ್ಕಳ ಸಹಾಯವಾಣಿ-1098 ಮಕ್ಕಳಿಗೆ ಅರಿವು ಜಾಗೃತಿ ಮೂಡಿಸುವ ಕುರಿತು ವಿವಿಧ ಇಲಾಖೆಗಳು ನಿಗಾವಹಿಸಬೇಕಾದ ಆದ್ಯತೆಯ ಅಂಶಗಳ ಕುರಿತು ಏಳು ಇಲಾಖೆಗಳಿಂದ ಸುತ್ತೋಲೆ ಹೊರಡಿಸಲಾಗಿದೆ ಎಂದು ವಿಧಾನಸಭೆಯಲ್ಲಿ ತಿಳಿಸಿದರು.

Post a Comment

0Comments

Post a Comment (0)