ಬೆಂಗಳೂರು : ಜಯನಗರ 5ನೇ ಬಡಾವಣೆಯ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶದಂತೆ ಶ್ರೀಮಠದ ಹಿರಿಯ ವ್ಯವಸ್ಥಾಪಕರಾದ ಶ್ರೀ ಆರ್ ಕೆ ವಾದೀಂದ್ರಾಚಾರ್ಯರ ನೇತೃತ್ವದಲ್ಲಿ ಜನವರಿ 15, ಗುರುವಾರ ಸಂಜೆ 5-15ಕ್ಕೆ ಕು|| ಸಂಗೀತಾ ಬಾಲು ಅವರ ದಾಸವಾಣಿ ಕಾರ್ಯಕ್ರಮ ಏರ್ಪಡಿಸಿದ್ದು,
ವಾದ್ಯ ಸಹಕಾರದಲ್ಲಿ ಶ್ರೀ ಬಾಲಸುಬ್ರಹ್ಮಣ್ಯಂ (ಮೃದಂಗ), ಶ್ರೀ ಸಮರ್ಥ್ (ಕೀ-ಬೋರ್ಡ್), ಶ್ರೀ ಅಭಿಜಿತ್ (ತಬಲಾ), ಮತ್ತು ಶ್ರೀ ಕೃಷ್ಣಕುಮಾರ್ (ಜಂಬೆ) ಸಾಥ್ ನೀಡಲಿದ್ದಾರೆ ಎಂದು ಶ್ರೀ ನಂದಕಿಶೋರ್ ಆಚಾರ್ಯರು ತಿಳಿಸಿದ್ದಾರೆ. ಸ್ಥಳ : ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, ಜಯನಗರ 5ನೇ ಬಡಾವಣೆ, ಬೆಂಗಳೂರು-41