ಬೆಂಗಳೂರು : ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್.ಎಂ.ರೇವಣ್ಣ ಅವರುಜನವರಿ 9 ರಂದು ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಚಿವರೊಂದಿಗೆ ‘ವೀರಭೂಮಿ’ ಸಂಗೊಳ್ಳಿ ರಾಯಣ್ಣ ವಸ್ತು ಸಂಗ್ರಹಾಲಯ ಪರಿವೀಕ್ಷಣೆ ನಡೆಸಲಿದ್ದಾರೆ. ನಂತರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸಚಿವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ‘ವೀರಭೂಮಿ’ ಸಂಗೊಳ್ಳಿ ರಾಯಣ್ಣ ವಸ್ತು ಸಂಗ್ರಹಾಲಯದ ಉದ್ಘಾಟನೆಯ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಜನವರಿ 11 ರಂದು ಯಾದಗಿರಿ ಪ್ರವಾಸ ಕೈಗೊಂಡು ಜನವರಿ 12 ರಂದು ಯಾದಗಿರಿ ಜಿಲ್ಲಾ ಗ್ರಾರಂಟಿ ಯೋಜನೆಗಳ ಅನುಷ್ಠಾನ ಕಾರ್ಯಾಗಾರ ಮತ್ತು ಪ್ರಗತಿ ಪರಿಶೀಲನಾ ಸಭೆ ನಡೆಸಿ ಅಂದು ರಾತ್ರಿ ಕೇಂದ್ರಸ್ಥಾನಕ್ಕೆ ವಾಪಸ್ಸಾಗಲಿದ್ದಾರೆ ಎಂದು ಅಧ್ಯಕ್ಷರ ಆಪ್ತ ಕಾರ್ಯದರ್ಶಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.