ಬೆಂಗಳೂರು : ಭಾರತ ಕಮ್ಯುನಿಸ್ಟ್ ಪಕ್ಷದ ಹಿರಿಯ ನಾಯಕ ಹಾಗೂ ಜನಪ್ರಿಯ ಕಾರ್ಮಿಕ ಮುಖಂಡರಾದ ಎಚ್.ವಿ. ಅನಂತ ಸುಬ್ಬರಾವ್ ಅವರು ನಿಧನರಾದ ಸುದ್ದಿ ತಿಳಿದು ದುಃಖವಾಯಿತು. ಸುದೀರ್ಘ ನಾಲ್ಕು ದಶಕಗಳ ಕಾಲ ಕಾರ್ಮಿಕ ಮುಖಂಡರಾಗಿ ಅನೇಕ ಚಳವಳಿಗಳನ್ನು ಮುನ್ನಡೆಸಿದ್ದ ಹೋರಾಟಗಾರ ಅನಂತ ಸುಬ್ಬರಾವ್ ನನಗೂ ಆತ್ಮೀಯರಾಗಿದ್ದರು.
ಅವರ ದಣಿವರಿಯದ ಹೋರಾಟದ ಛಲ ಮತ್ತು ಸೈದ್ಧಾಂತಿಕ ಬದ್ಧತೆ ಹೋರಾಟಗಾರರಿಗೆ ಒಂದು ಮಾದರಿ. ಅವರ ನಿರ್ಗಮನದಿಂದ ಸಮಾಜಕ್ಕೆ, ಮುಖ್ಯವಾಗಿ ಕಾರ್ಮಿಕ ವರ್ಗಕ್ಕೆ ತುಂಬಲಾರದ ನಷ್ಟವಾಗಿದೆ.ಮೃತರ ಆತ್ಮಕ್ಕೆ ಚಿರಶಾಂತಿ ಲಭಿಸಲಿ, ಅವರ ಕುಟುಂಬವರ್ಗಕ್ಕೆ ನೋವು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಂತಾಪವನ್ನು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.Post a Comment
0Comments