ಕೆಎಸ್‍ಆರ್‍ಟಿಸಿ: ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಕೇಂದ್ರಗಳ ಮೂಲಕ ಮುಂಗಡ ಟಿಕೆಟ್ ಕಾಯ್ದಿರಿಸಲು ಅವಕಾಶ

varthajala
0

 ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಪ್ರಯಾಣಿಕರ ಪ್ರಯಾಣವನ್ನು ಇನ್ನಷ್ಟು ಸುಲಭ ಮತ್ತು ಆರಾಮದಾಯಕವಾಗಿಸಲು ಆನ್‍ಲೈನ್ ಮುಂಗಡ ಟಿಕೆಟ್ ಕಾಯ್ದಿರಿಸುವ ವ್ಯವಸ್ಥೆಯನ್ನು ಒದಗಿಸುತ್ತಿದೆ. ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಕೇಂದ್ರಗಳ ಮೂಲಕ ಮುಂಗಡ ಟಿಕೆಟ್ ಕಾಯ್ದಿರಿಸಲು ಅವಕಾಶ ಕಲ್ಪಿಸಲಾಗಿದೆ. 

ಕೆಎಸ್‍ಆರ್‍ಟಿಸಿ ವೆಬ್‍ಸೈಟ್, ಮೊಬೈಲ್ ಆಪ್, ಇಲಾಖಾ ಕೌಂಟರ್‍ಗಳು ಹಾಗೂ ಫ್ರಾಂಚೈಸಿ ಕೌಂಟರ್‍ಗಳ ಜೊತೆಗೆ, ಪ್ರಯಾಣಿಕರು ಈಗ ತಮ್ಮ ಮನೆಗೆ ಸಮೀಪದಲ್ಲಿರುವ ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಕೇಂದ್ರಗಳ ಎಲೆಕ್ಟ್ರಾನಿಕ್ ಡೆಲಿವರಿ ಆಫ್ ಸಿಟಿಜನ್ ಸರ್ವಿಸಸ್ ನಿರ್ದೇಶನಾಲಯ ರವರ ಬೆಂಗಳೂರು-ಒನ್ ಹಾಗೂ ಕರ್ನಾಟಕ-ಒನ್ ಕೇಂದ್ರಗಳಲ್ಲೂ ಕಾರ್ಯಗತಗೊಳಿಸಲಾಗಿದೆ. 
ಈ ಸೇವೆ ಬೆಂಗಳೂರು ನಗರದಲ್ಲಿರುವ 161 ಬೆಂಗಳೂರು-ಒನ್ ಕೇಂದ್ರಗಳಲ್ಲಿ ಹಾಗೂ ಕರ್ನಾಟಕ ರಾಜ್ಯದ ಜಿಲ್ಲಾ ಕೇಂದ್ರ ಮತ್ತು ತಾಲ್ಲೂಕು ಕೇಂದ್ರಗಳಲ್ಲಿರುವ 1021 ಕರ್ನಾಟಕ-ಒನ್ ಕೇಂದ್ರಗಳಲ್ಲಿ, ಲಭ್ಯವಿದೆ. ಪ್ರಯಾಣಿಕರು ಈ ಸುಲಭ ಮತ್ತು ಹತ್ತಿರದ ಟಿಕೆಟ್ ಬುಕ್ಕಿಂಗ್ ಸೇವೆಯನ್ನು ಬಳಸಿಕೊಳ್ಳಬಹುದಾಗಿದೆ. 
ಟಿಕೆಟ್ ಕಾಯ್ದಿರಿಸುವಿಕೆ ಅಥವಾ ಯಾವುದೇ ಸಹಾಯಕ್ಕಾಗಿ, ಪ್ರಯಾಣಿಕರು ಕೆಎಸ್‍ಆರ್‍ಟಿಸಿ ಕರೆ ಕೇಂದ್ರವನ್ನು 080-26252625 ಅಥವಾ ಅವತಾರ್ ಸೆಲ್ 7760990034 / 7760990035 (ಬೆಳಿಗ್ಗೆ 7.00 ರಿಂದ ರಾತ್ರಿ 10.00 ಗಂಟೆವರೆಗೆ) ಅಥವಾ ಬೆಂಗಳೂರು-ಒನ್ ಕರೆ ಕೇಂದ್ರವನ್ನು 080-49203888 ಸಂಪರ್ಕಿಸಬಹುದು ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವಾಣಿಜ್ಯ ವಿಭಾಗದ ಮುಖ್ಯ ಸಂಚಾರ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Post a Comment

0Comments

Post a Comment (0)