ಕೆಎಸ್‍ಆರ್‍ಟಿಸಿ: ಅಂತರ ನಿಗಮ ವರ್ಗಾವಣೆಗೆ ಅವಕಾಶ

varthajala
0

 ಬೆಂಗಳೂರು : ಕರ್ನಾಟಕ ಸರ್ಕಾರವು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂ.ಮ.ಸಾ.ನಿಗಮ, ಕ.ಕ.ರ.ಸಾ.ನಿಗಮ ಮತ್ತು ವಾ.ಕ.ರ.ಸಾ.ನಿಗಮಗಳ ದರ್ಜೆ-3 ಮೇಲ್ವಿಚಾರಕೇತರ ಮತ್ತು ದರ್ಜೆ-4 ರ ನೌಕರರಿಗೆ ಅಂತರ ನಿಗಮ ವರ್ಗಾವಣೆಗೆ ಅವಕಾಶ ಕಲ್ಪಿಸಲಾಗಿದೆ.

ಕ.ರಾ.ರ.ಸಾ.ನಿಗಮವು ವರ್ಗಾವಣೆ ನಿರ್ದೇಶನಗಳನ್ನು ನೀಡಲಾಗಿದ್ದು, 2026ನೇ ಸಾಲಿನ ವರ್ಗಾವಣೆ ಪ್ರಕ್ರಿಯೆ ಜನವರಿ 01 ರ ಬೆಳಿಗ್ಗೆ 11:00 ಗಂಟೆಯಿಂದ ಪ್ರಾರಂಭವಾಗಲಿದ್ದು, 2026 ರ ಜನವರಿ 31 ರ ಸಂಜೆ 5:30 ರವರೆಗೆ ಆನ್-ಲೈನ್ ಮೂಲಕ www.ksrtc.org/transfer ರಲ್ಲಿ ಸಾಮಾನ್ಯ ವರ್ಗಾವಣೆ, ಪತಿ-ಪತ್ನಿ / ಶೇ.40ಕ್ಕಿಂತ ಹೆಚ್ಚಿನ ಅಂಗವಿಕಲತೆ ಹೊಂದಿರುವ ನೌಕರರು/ತೀವ್ರ ತರಹದ ಅನಾರೋಗ್ಯ (ಹೆಚ್.ಐ.ವಿ, ಹೃದಯ ರೋಗ, ಕ್ಯಾನ್ಸರ್, ಸ್ಪೈನಲ್‍ಕಾರ್ಡ್, ಕಿಡ್ನಿ ವೈಫಲ್ಯ ಹಾಗೂ ಮೆದಳು ಸಂಬಂಧಿಸಿದ ಖಾಯಿಲೆಗಳು) ಹೊಂದಿರುವ ನೌಕರರು ಮತ್ತು ಪರಸ್ಪರ ವರ್ಗಾವಣೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ನೌಕರರು ಈ ಸೌಲಭ್ಯದ ಸದುಪಯೋಗವನ್ನು ಪಡೆಯಬಹುದು ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ವರ್ಗಾವಣೆ ಸಮಿತಿಯ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Post a Comment

0Comments

Post a Comment (0)