ಬೆಂಗಳೂರು : ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ, ಶ್ರೀ ಜಗದ್ಗುರು ಸಿದ್ದರಾಮೇಶ್ವರ ಮಹಾಸಂಸ್ಥಾನ ಭೋವಿ ಗುರುಪೀಠ ಮತ್ತು ರಾಷ್ಟ್ರೀಯ ಕಾನೂನು ಶಾಲೆ, ಬೆಂಗಳೂರು ಸಾಮಾಜಿಕ ಒಳಗೊಳ್ಳುವಿಕೆ ಅಧ್ಯಯನ ಕೇಂದ್ರ ಇವರ ಸಹಯೋಗದಲ್ಲಿ, ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ವಾಸಿಸುತ್ತಿರುವ ಭೋವಿ ಸಮುದಾಯದ ಯುವಜನರು ಮತ್ತು ನಾಮಾಜಿಕ ಕಾರ್ಯಕರ್ತರಿಗೆ ಸಂವಿಧಾನ ಮತ್ತು ಸಾಮಾಜಿಕ ನ್ಯಾಯ ಸಂಬಂಧಿತ ಕಾನೂನುಗಳ ಬಗ್ಗೆ ಸಮಗ್ರ ಅರಿವು ಮೂಡಿಸುವ ಉದ್ದೇಶದಿಂದ ಎರಡು ದಿನಗಳ ನಾಲ್ಕು ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು. ಶನಿವಾರ ಬೆಳಿಗ್ಗೆ 10.00 ಗಂಟೆಗೆ ಈ ಕಾರ್ಯಾಗಾರವನ್ನು ರಾಮಪ್ಪ ಎಂ. ಅಧ್ಯಕ್ಷರು, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ, ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ಸರ್ಕಾರ, ಬೆಂಗಳೂರು ಇವರು ಉದ್ಘಾಟನೆ ಮಾಡಿದರು.
ಭೋವಿ ಸಮುದಾಯವು ಸಾಮಾಜಿಕ, ಶೈಕ್ಷಣಿಕ ಹಾಗೂ ಕಾನೂನಾತ್ಮಕ ಮಾಹಿತಿಯ ಕೊರತೆಯಿಂದಾಗಿ ಅನೇಕ ಸವಾಲುಗಳನ್ನು ಎದುರಿಸುತ್ತಿದೆ. ಈ ಹಿನ್ನೆಲೆಯಲ್ಲಿಯೇ, ಸಮುದಾಯದೊಳಗೆ ಸಾಮಾಜಿಕ ನ್ಯಾಯದ ಅರಿವು, ಕಾನೂನು ತಿಳುವಳಿಕೆ ಮತ್ತು ನಾಯಕತ್ವ ಕೌಶಲ್ಯಗಳನ್ನು ಬೆಳೆಸುವ ಅಗತ್ಯವಿದೆ ಎಂಬುದನ್ನು ಮನಗಂಡು ಈ ಕಾರ್ಯಾಗಾರವನ್ನು ಆಯೋಜಿಸಲಾಗಿದೆ. ಕಾರ್ಯಾಗಾರದ ಮುಖ್ಯ ಉದ್ದೇಶಗಳು ಸಂವಿಧಾನಾತ್ಮಕ ಹಕ್ಕುಗಳು ಮತ್ತು ಸಾಮಾಜಿಕ ನ್ಯಾಯದ ಕಾನೂನುಗಳ ಕುರಿತು ಸಮುದಾಯದ ಯುವಜನರಲ್ಲಿ ಅರಿವು ಮೂಡಿಸುವುದು, ಶಿಕ್ಷಣ, ಆರೋಗ್ಯ, ಆರ್ಥಿಕ ಮತ್ತು ಸಾಮಾಜಿಕ ಸ್ಥಿತಿಗತಿಗಳನ್ನು ಸಂವಿಧಾನಾತ್ಮಕ ದೃಷ್ಟಿಕೋನದಿಂದ ಅರ್ಥಮಾಡಿಕೊಳ್ಳಲು ಸಹಾಯ ಮಾಡುವುದು. ಸರ್ಕಾರದ ಯೋಜನೆಗಳು ಮತ್ತು ಕಲ್ಯಾಣ ಕಾರ್ಯಕ್ರಮಗಳ ಪರಿಣಾಮಕಾರಿ ಅನುμÁ್ಠನಕ್ಕೆ ಅಗತ್ಯವಾದ ಮಾಹಿತಿ ನೀಡುವುದು ಕಾನೂನುಗಳ ಅನುμÁ್ಠನದಲ್ಲಿ ಎದುರಾಗುವ ಸವಾಲುಗಳು ಹಾಗೂ ಅವುಗಳಿಗೆ ಪರಿಹಾರ ಮಾರ್ಗಗಳನ್ನು ವಿವರಿಸುವುದು ಸ್ಥಳೀಯ ಮಟ್ಟದಲ್ಲಿ ಸಮುದಾಯದ ಸಮಸ್ಯೆಗಳಿಗೆ ಮಾರ್ಗದರ್ಶನ ನೀಡುವ ಸಾಮಾಜಿಕ ನಾಯಕತ್ವವನ್ನು ರೂಪಿಸಿಕೊಳ್ಳಬೇಕು ಎಂದು ಹೇಳಿದರು.
ದಿವ್ಯಸಾನಿಧ್ಯವನ್ನು ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಶ್ರೀ ಜಗದ್ಗುರು ಸಿದ್ಧರಾಮೇಶ್ವರ ಮಹಾಸಂಸ್ಥಾನ ಭೋವಿ ಗುರುಪೀಠ, ಚಿತ್ರದುರ್ಗ ಇವರು ಕಾರ್ಯಾಗಾರವನ್ನು ಉದ್ದೇಶಿಸಿ ಮಾತನಾಡುತ್ತಾ ಸಮುದಾಯದ ಯುವಕರು ಸಂವಿಧಾನದ ಆಶಯಗಳ ಬಗ್ಗೆ ತಿಳಿದುಕೊಳ್ಳುವುದು ತುಂಬಾ ಅವಶ್ಯಕತೆ ಇದೆ. ಜೊತೆಗೆ ನಾವುಗಳು ಎμÉ್ಟೀ ದೊಡ್ಡ ಮಟ್ಟದಲ್ಲಿ ಬೆಳೆದರೂ ಸಹ ಸಮಾಜದಲ್ಲಿ ಪ್ರತಿದಿನ ನಡೆಯುವ ವಿದ್ಯಾಮಾನಗಳ ಬಗ್ಗೆ ಅರ್ಥಮಾಡಿಕೊಳ್ಳುವುದು ಬಹಳ ಮುಖ್ಯ ಮತ್ತು ಈ ಎರಡು ದಿನದ ಕಾರ್ಯಾಗಾರದಲ್ಲಿ ನಡೆಯುವಂತಹ ವಿವಿದ ವಿಷಯಗಳ ಕುರಿತು ತಿಳಿದುಕೊಳ್ಳುವ ಮನಸ್ಸು ನಮ್ಮದಾಗಬೇಕು. ಜೊತೆಗೆ ನಾವು ಕಲಿತುಕೊಂಡಿದ್ದನ್ನು ಬೇರೆಯವರಿಗೆ ಅದನ್ನು ತಿಳಿಸುವಂತಹ ಕೆಲಸ ನಾವುಗಳು ಮಾಡಬೇಕು, ಆಗ ಸಮುದಾಯದ ಅಭಿವೃದ್ಧಿ ಆಗುತ್ತದೆ ಎಂದು ಸೇರಿರುವ ಎಲ್ಲಾ ಸಮುದಾಯದ ಯುವಕ ಯುವತಿಯರಿಗೆ ಮತ್ತು ಮುಖಂಡರಿಗೆ ತಿಳಿಸಿದರು. ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ ವ್ಯವಸ್ಥಾಪಕ ನಿರ್ದೇಶಕರು ಪ್ರಾಸ್ತಾವಿಕವಾಗಿ ಮಾತನಾಡಿ ಸಮುದಾಯದ ಸಮಗ್ರ ಅಭಿವೃದ್ಧಿ ಆಗಬೇಕಾದರೆ ಸಮುದಾಯದಲ್ಲಿ ಸಮಗ್ರವಾದ ಜಾಗೃತಿ ಮೂಡಬೇಕು. ಅದಕ್ಕಾಗಿ ಈ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ. ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು. ಮಾಜಿ ಸಚಿವರಾದ ಅರವಿಂದ ಲಿಂಬಾವಳಿಯವರು ಮಾತನಾಡುತ್ತಾ ಸಮುದಾಯದ ಅಭಿವೃದ್ಧಿಗೆ ಸಂಘಟನೆ ಮುಖ್ಯ ಎಲ್ಲರೂ ಒಟ್ಟಾಗಿ ಸಂಘಟಿತವಾಗಿ ಪ್ರಯತ್ನಿಸಿದರೆ ಮಾತ್ರ ಅಭಿವೃದ್ಧಿ ಸಾಧ್ಯ ಎಂದು ತಿಳಿಸಿದರು. ಈ ಕಾರ್ಯಾಗಾರದಲ್ಲಿ ಯುವ ಮುಖಂಡರಾದ ರವಿ ಪೂಜಾರಿ, ಗೋವಿಂದಪ್ಪ, ಇವರು ಉಪಸ್ಥಿತರಿದ್ದರು ಹಾಗೂ ವಿವಿಧ ಜಿಲ್ಲೆಗಳಿಂದ ಆಗಮಿಸಿದ ಸಮುದಾಯದ ಯುವಕರು/ ಮುಖಂಡರು ಈ ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.