ಪರಮಪೂಜ್ಯ ಶ್ರೀ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಬೆಂಗಳೂರಿನ ಪವಮಾನಪುರದ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶ್ರೀಮಠದ ವಿಚಾರಣಾಕರ್ತರಾದ ಶ್ರೀ ಗಿರಿರಾಜಾಚಾರ್ಯರ ನೇತೃತ್ವದಲ್ಲಿ ಗುರುವಾರ ಸಂಜೆ ಏರ್ಪಡಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಧಾರವಾಡದ ಶ್ರೀಮತಿ ಅರ್ಪಿತಾ ಜಹಗೀರ್ದಾರ್
ಅವರು ಅಪರೋಕ್ಷ ಜ್ಞಾನಿಗಳಿಂದ ರಚಿಸಲ್ಪಟ್ಟ ಹಲವಾರು ಅಪರೂಪದ ಹರಿದಾಸರ ಪದಗಳನ್ನು ತಾರತಮ್ಯೋಕ್ತವಾಗಿ ಮತ್ತು ಸುಶ್ರಾವ್ಯವಾಗಿ ಪ್ರಸ್ತುತಪಡಿಸಿದರು. ಇವರ ಗಾಯನಕ್ಕೆ ಹಾರ್ಮೋನಿಯಂ ವಾದನದಲ್ಲಿ ಶ್ರೀ ಸುಧನ್ವ, ತಬಲಾ ವಾದನದಲ್ಲಿ ಶ್ರೀ ಪ್ರಮೋದ್ ಗಬ್ಬೂರು ಸಾಥ್ ನೀಡಿದರು.Post a Comment
0Comments