ಬೆಳಗಾವಿ / ಬೆಂಗಳೂರು : ಎಂಜಿನಿಯರ್‍ಗಳಾದ ನೀವು ನಿಮ್ಮ ಜ್ಞಾನ ಮತ್ತು ಸುಸ್ಥಿರತೆ, ಸ್ಥಿತಿಸ್ಥಾಪಕತ್ವನ್ನು ಒಳಗೊಂಡು ರಾಷ್ಟ್ರೀಯ ಸನ್ನದ್ಧತೆಯನ್ನು ಬಲಪಡಿಸಲು ಶ್ರಮಿಸಬೇಕೆಂದು ಕರ್ನಾಟಕ ನೌಕಾ ನೆಲೆಯ ಫ್ಲಾಗ್ ಆಫೀಸರ್ ಕಮಾಂಡಿಂಗ್ ರಿಯರ್ ಅಡ್ಮಿರಲ್ ವಿಕ್ರಂ ಮೆನನ್ ಹೇಳಿದರು.ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ತನ್ನ ಬೆಳಗಾವಿ ಕ್ಯಾಂಪಸ್ ಜ್ಞಾನ ಸಂಗಮದಲ್ಲಿ ಆಯೋಜಿಸಿದ್ದ ತನ್ನ 25 ನೇ ವಾರ್ಷಿಕ ಘಟಿಕೋತ್ಸವದಲ್ಲಿ (ಭಾಗ-2) ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿ ಮಾತನಾಡಿದ ಅವರು, ರಾಷ್ಟ್ರದ ಪ್ರಗತಿ, ಭದ್ರತೆ ಮತ್ತು ಸಮೃದ್ಧಿಗೆ ನೀವು ನೀಡುವ ಕೊಡುಗೆಗಳಿಗೆ ಮುಂಗಡವಾಗಿ ಶುಭ ಹಾರೈಸುತ್ತೇನೆ.
ಎಂಜಿನಿಯರ್‍ಗಳು ಕಂಡು ಹಿಡಿಯುವ ನೂತನ ತಂತ್ರಜ್ಞಾನಗಳು ಮನುಷ್ಯನು ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವಂತಿರಬೇಕು. ಹವಾಮಾನ ಬದಲಾವಣೆಯನ್ನು ಎದುರಿಸುವುದರಿಂದ ಹಿಡಿದು, ಆರೋಗ್ಯ ಸೇವೆಗಳನ್ನು ಸುಧಾರಿಸುವವರೆಗೂ ತಂತ್ರಜ್ಞಾನದ ಅವಶ್ಯಕತೆ ಇದೆ.ನಿಜವಾದ ನಾಯಕತ್ವವು ನವೀನತೆಯಲ್ಲμÉ್ಟೀ ಅಲ್ಲ, ನೈತಿಕ ಹೊಣೆಗಾರಿಕೆ, ತಂಡದ ಕೆಲಸ, ವಿದ್ಯಾರ್ಥಿಗಳು ಸ್ವಾರ್ಥ ಬಿಟ್ಟು ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು. ನೀವು ಇದೀಗ ವೃತ್ತಿ ಜೀವನಕ್ಕೆ ಹೆಜ್ಜೆ ಹಿಡುತ್ತಿದ್ದೀರಿ, ದೊಡ್ಡ ಕನಸುಗಳನ್ನು ಕಾಣಿ. ಧೈರ್ಯವಾಗಿ ಸಮಸ್ಯೆಗಳನ್ನು ಎದುರಿಸಿ ಎಂದು ಸಲಹೆ ನೀಡಿದರು.
ವಿಟಿಯು ಕೃತಕ ಬುದ್ಧಿಮತ್ತೆ (ಎಐ), ಕ್ವಾಂಟಮ್ ಕಂಪ್ಯೂಟಿಂಗ್ ನಂತಹ ತಂತ್ರಜ್ಞಾನಗಳು, ಅಡ್ವಾನ್ಸ್ ಕಮ್ಯೂನಿಕೇಷನ್, ಸೈಬರ್ ಸೆಕ್ಯೂರಿಟಿಯನ್ನು ಪಠ್ಯಕ್ರಮದಲ್ಲಿ ಅಳವಡಿಸಿಕೊಳ್ಳುವ ಮೂಲಕ ತಂತ್ರಜ್ಞಾನದಲ್ಲಿ ಮುಂದಿದೆ. ಇದು ರಾಷ್ಟ್ರದ ಪ್ರಗತಿ ಮತ್ತು ಭದ್ರತೆಗೆ ಅತ್ಯಂತ ಅಗತ್ಯವಾದ ಕ್ಷೇತ್ರಗಳಾಗಿವೆ ಎಂದರು.ಏರೋಸ್ಪೇಸ್ ಮತ್ತು ಡಿಫೆನ್ಸ್‍ನಲ್ಲಿ "ಸೆಂಟರ್ ಆಫ್ ಎಕ್ಸಲೆನ್ಸ್" ಸ್ಥಾಪನೆ ಮತ್ತು ಡಿಫೆನ್ಸ್ ಟೆಕ್ನಾಲಜಿಯಲ್ಲಿ ಪ್ರಸ್ತಾಪಿತ ಎಂ.ಟೆಕ್ ಕಾರ್ಯಕ್ರಮಗಳು, ಭವಿಷ್ಯಕ್ಕೆ ಸಿದ್ಧವಾದ ಕೌಶಲ್ಯಾಭಿವೃದ್ಧಿಗೆ ವಿ.ಟಿ.ಯು ನೀಡುತ್ತಿರುವ ಬದ್ಧತೆಯನ್ನು ಪ್ರತಿಬಿಂಬಿಸುತ್ತವೆ ಎಂದರು.ಶಿಕ್ಷಣ, ಸಂಶೋಧನೆ ಮತ್ತು ನವೀನತೆಯಲ್ಲಿ ಸಹಕಾರವನ್ನು ಬಲಪಡಿಸಲು ಉದ್ದೇಶದಿಂದ ವಿಟಿಯು, ನೌಕಾನೆಲೆಯೊಂದಿಗೆ ಒಪ್ಪಂದ ಮಾಡಿಕೊಳ್ಳವುದಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ ಇಂತಹ ಸಹಭಾಗಿತ್ವಗಳು ವಿದ್ಯಾರ್ಥಿಗಳು, ಸಂಶೋಧಕರು ಮತ್ತು ನೌಕಾಪಡೆಯ ಸಿಬ್ಬಂದಿ ಏರೋಸ್ಪೇಸ್, ರಕ್ಷಣಾ ಮತ್ತು ತಂತ್ರಜ್ಞಾನ ಕ್ಷೇತ್ರಗಳ ಸಂಕೀರ್ಣ ಸವಾಲುಗಳನ್ನು ಸಂಯುಕ್ತವಾಗಿ ಎದುರಿಸಲು ಸಾಧ್ಯವಾಗುತ್ತದೆ ಎಂದರು.
ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಮಾತನಾಡಿ, ವಿಶ್ವೇಶ್ವರಯ್ಯ ಅವರು ತಮ್ಮ ದೂರದೃಷ್ಟಿ ಇಟ್ಟುಕೊಂಡು ಈ ವಿಶ್ವವಿದ್ಯಾಲಯ ಆರಂಭಿಸಿದ್ದಾರೆ. ತಂತ್ರಜ್ಞಾನಗಳು ಸಾಮಾನ್ಯ ವರ್ಗದ ಜನರ ಸಮಸ್ಯೆಗಳನ್ನು ಬಗೆಹರಿಸುವಂತಿರಬೇಕು. ಕರ್ನಾಟಕ ರಾಜ್ಯವು ಜ್ಞಾನ, ನಾವೀನ್ಯತೆ ಮತ್ತು ಉತ್ತಮ ಆಡಳಿತದ ಕ್ಷೇತ್ರಗಳಲ್ಲಿ ಯಾವಾಗಲೂ ಪ್ರಮುಖ ಪಾತ್ರ ವಹಿಸಿದೆ.ಪ್ರಸ್ತುತ ರಾಜ್ಯವು ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ಬಾಹ್ಯಾಕಾಶ ವಿಜ್ಞಾನ, ನವೋದ್ಯಮ ಸಂಸ್ಕøತಿ ಮತ್ತು ಉನ್ನತ ಶಿಕ್ಷಣ ಕ್ಷೇತ್ರಗಳಲ್ಲಿ ದೇಶವು ಮುಂಚೂಣಿಯಲ್ಲಿದೆ. ಆತ್ಮವಿಶ್ವಾಸದ ಮತ್ತು "ಅಭಿವೃದ್ಧಿ ಹೊಂದಿದ ಭಾರತ"ವನ್ನು ಸಾಧಿಸುವ ಸಂಕಲ್ಪದೊಂದಿಗೆ ಮುಂದುವರಿಯುತ್ತಿರುವ ಭಾರತ ಮತ್ತು ಕರ್ನಾಟಕವನ್ನು ಯುವಪೀಳಿಗೆ ಪ್ರತಿನಿಧಿಸುತ್ತಾರೆ. ಈ ಗುರಿಯನ್ನು ಸಾಧಿಸುವಲ್ಲಿ ಜ್ಞಾನ, ಕಠಿಣ ಪರಿಶ್ರಮ ಮತ್ತು ನಿಮ್ಮ ಕರ್ತವ್ಯ ಪ್ರಜ್ಞೆ ಪ್ರಮುಖ ಪಾತ್ರ ವಹಿಸುತ್ತದೆ ಎಂದು ತಿಳಿಸಿದರು.ನಿಮ್ಮ ಈ ಸಾಧನೆಗೆ ನಿಮ್ಮ ಪೋಷಕರು, ಅಧ್ಯಾಪಕರು ಮತ್ತು ವಿಶ್ವವಿದ್ಯಾಲಯದ ಕುಟುಂಬದ ಕೊಡುಗೆಗಳು ಅಪಾರ. ಅವರ ಮಾರ್ಗದರ್ಶನ, ತ್ಯಾಗ ಮತ್ತು ನಿರಂತರ ಪ್ರಯತ್ನಗಳಿಲ್ಲದೆ, ನಿಮ್ಮ ಶೈಕ್ಷಣಿಕ ಪ್ರಯಾಣ ಸಾಧ್ಯವಾಗುತ್ತಿರಲಿಲ್ಲ. ಅವರೆಲ್ಲರಿಗೂ ನಾನು ಹೃತ್ಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ. ಎಲ್ಲಾ ಪದವಿ ವಿಜೇತರು ಮತ್ತು ಚಿನ್ನದ ಪದಕ ವಿಜೇತರಿಗೆ ಮತ್ತೊಮ್ಮೆ ನನ್ನ ಹೃತ್ಪೂರ್ವಕ ಅಭಿನಂದನೆಗಳು ಎಂದು ಶುಭ ಹಾರೈಸಿದರು.
ಈ ಘಟಿಕೋತ್ಸವದಲ್ಲಿ ಒಟ್ಟು 8,702 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು. ಈ ಪೈಕಿ 96 ವಿದ್ಯಾರ್ಥಿಗಳು ರ್ಯಾಂಕ್ ವಿಜೇತರು ಹಾಗೂ 25 ವಿದ್ಯಾರ್ಥಿಗಳು ಚಿನ್ನದ ಪದಕವನ್ನು ಪಡೆದಕೊಂಡರು. ವಿಟಿಯು ಕುಲಪತಿ ಪ್ರೊ.ಎಸ್.ವಿದ್ಯಾಶಂಕರ್, ಕುಲಸಚಿವರಾದ ಪ್ರ್ರೊ.ಯು.ಜೆ.ಉಜ್ವಲ್, ಪ್ರೊ.ಪ್ರಸಾದ್ ಬಿ.ರಾಂಪೂರೆ, ವಿಟಿಯು ವಿದ್ಯಾವಿಷಯಕ ಪರಿಷತ್ತಿನ ಸದಸ್ಯರು, ಕಾರ್ಯಕಾರಿ ಸಮಿತಿಯ ಸದಸ್ಯರು ಭಾಗವಹಿಸಿದ್ದರು.