ಚಲನಚಿತ್ರ ಕಾರ್ಮಿಕರು, ಕಲಾವಿದರು ಹಾಗೂ ತಂತ್ರಜ್ಞರ ಒಕ್ಕೂಟದ 40ನೇ ವರ್ಷದ ಸಂಭ್ರಮ ಸಮಾವೇಶ

varthajala
0

ಫೆಬ್ರವರಿ 8 ರಂದು ಬೆಂಗಳೂರಿನಲ್ಲಿ ಚಲನಚಿತ್ರ ಕಾರ್ಮಿಕರು,

ಕಲಾವಿದರು ಹಾಗೂ ತಂತ್ರಜ್ಞರ ಒಕ್ಕೂಟದ 40ನೇ ವರ್ಷದ ಸಂಭ್ರಮ ಸಮಾವೇಶ

ಬೆಂಗಳೂರು – ಚಲನಚಿತ್ರ ಉತ್ತಮವಾಗಿ ಮೂಡಿಬರಲು ಕಾರ್ಮಿಕರ ಶ್ರಮ ಅತ್ಯಂತ ಮಹತ್ವದ್ದಾಗಿದೆ. ಕರ್ನಾಟಕ ಚಲನಚಿತ್ರ ಕಾರ್ಮಿಕರು, ಕಲಾವಿದರು ಹಾಗೂ ತಂತ್ರಜ್ಞರ ಒಕ್ಕೂಟವು ಕಳೆದ 40 ವರ್ಷಗಳಿಂದ ಹಗಲಿರುಳೆನ್ನದೆ ದುಡಿಯುತ್ತಿರುವ ಸುಮಾರು ಐದು ಸಾವಿರಕ್ಕೂ ಹೆಚ್ಚು ದಿನಗೂಲಿ ಕಾರ್ಮಿಕರ ಕಲ್ಯಾಣ ಮತ್ತು ಏಳಿಗೆಗಾಗಿ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದೆ.

ಈ ಹಿನ್ನೆಲೆಯಲ್ಲಿ ಒಕ್ಕೂಟದ 40ನೇ ವರ್ಷದ ಸಂಭ್ರಮ ಸಮಾವೇಶವನ್ನು ಫೆಬ್ರವರಿ 8ರಂದು ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ಗಾಂಧಿನಗರದಲ್ಲಿರುವ ಒಕ್ಕೂಟದ ಆವರಣದಲ್ಲಿ ಆಯೋಜಿಸಲಾಗಿದೆ. ಈ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಆಗಮಿಸಲಿದ್ದಾರೆ. ಗೌರವ ಅತಿಥಿಗಳಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಸ್ಥಳೀಯ ಶಾಸಕರಾದ ದಿನೇಶ್ ಗುಂಡೂರಾವ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ನೂತನ ಅಧ್ಯಕ್ಷೆ ಜಯಮಾಲಾ ಉಪಸ್ಥಿತರಿರುತ್ತಾರೆ.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ, ನಿರ್ಮಾಪಕರ ಸಂಘದ ಪದಾಧಿಕಾರಿಗಳು, ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಾರ್ಮಿಕ ಕಲ್ಯಾಣ ಇಲಾಖೆಯ waಆಯುಕ್ತರು, ಚಲನಚಿತ್ರ ಕ್ಷೇತ್ರದ ವಿವಿಧ ಸಂಘಗಳ ಸದಸ್ಯರು ಹಾಗೂ ಅನೇಕ ಹಿರಿಯ ಕಲಾವಿದರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಚಲನಚಿತ್ರ ಕ್ಷೇತ್ರದ ಎಲ್ಲಾ ವಿಭಾಗಗಳ ಸದಸ್ಯರು ಹಾಗೂ ಕಲಾವಿದರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಮಾವೇಶವನ್ನು ಯಶಸ್ವಿಗೊಳಿಸಬೇಕೆಂದು ಕರ್ನಾಟಕ ಚಲನಚಿತ್ರ ಕಾರ್ಮಿಕರು, ಕಲಾವಿದರು ಮತ್ತು ತಂತ್ರಜ್ಞರ ಒಕ್ಕೂಟದ ಅಧ್ಯಕ್ಷ ಎಸ್. ಸೋಮಶೇಖರ್ ಹಾಗೂ ಒಕ್ಕೂಟದ ಕಾರ್ಯದರ್ಶಿ ಮತ್ತು ಸಮಾವೇಶ ಸಮಿತಿ ಅಧ್ಯಕ್ಷ ಎಸ್. ಎನ್. ರವಿಶಂಕರ್ ಮನವಿ ಮಾಡಿದ್ದಾರೆ.

Post a Comment

0Comments

Post a Comment (0)