ಬೆಂಗಳೂರು : ತುರ್ತು ನಿರ್ವಹಣೆ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಇದೆ ಫೆಬ್ರವರಿ 5 ಮತ್ತು 6 ರಂದು ಎರಡು ದಿನಗಳ ಕಾಲ ಬೆಂಗಳೂರು ನಗರದ ವಿವಿಧೆಡೆ ಕಾವೇರಿ ನೀರು ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಬೆಂಗಳೂರು ಜಲಮಂಡಳಿ ಅಧ್ಯಕ್ಷರಾದ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಅವರು ತಿಳಿಸಿದ್ದಾರೆ.ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ವತಿಯಿಂದ Supply, Fabrication and Laying 1200mm dia, 900mm dia and 700mm dia mild steel water supply pipe line from Sarakki, in lieu of old CWSS stage-I 1200mm cast Iron Pipeline ಕಾಮಗಾರಿ ಅಡಿಯಲ್ಲಿ 1200 ಮಿ.ಮೀ. ಮತ್ತು 700 ಮಿ.ಮೀ. ವ್ಯಾಸದ ಕೊಳವೆ ಮಾರ್ಗಗಳನ್ನು ಜೋಡಿಸಲು (ಐiಟಿಞiಟಿg) ಕಾಮಗಾರಿಯನ್ನು ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನೀರು ಸರಬರಾಜು ಯೋಜನೆಯ ಮೊದಲನೇ ಮತ್ತು ಎರಡನೇ ಹಂತಗಳ ಜಲರೇಚಕ ಯಂತ್ರಗಾರಗಳನ್ನು ಫೆಬ್ರವರಿ 5 ರಂದು ಬೆಳಗ್ಗೆ 6 ಗಂಟೆಯಿಂದ ಫೆಬ್ರವರಿ 6 ರ ಬೆಳಗ್ಗೆ 6 ಗಂಟೆಯವರೆಗೆ 24ಗಂಟೆಗಳ ಕಾಲ ಸ್ಥಗಿತಗೊಳಿಸಲಾಗುತ್ತಿದೆ.
ಮುಂಜಾಗ್ರತೆಯಾಗಿ ಅಗತ್ಯ ನೀರು ಸಂಗ್ರಹಿಸಿಟ್ಟುಕೊಳ್ಳಿ ಬೆಂಗಳೂರು ಜಲಮಂಡಳಿ ತುರ್ತು ನಿರ್ವಹಣೆ ಕಾಮಗಾರಿ - ಫೆಬ್ರವರಿ 5 ಮತ್ತು 6 ರಂದು ಕಾವೇರಿ ನೀರು ಸರಬರಾಜಿನಲ್ಲಿ ವ್ಯತ್ಯಯ
February 02, 2026
0
ಕಾವೇರಿ ನೀರು ಸರಬರಾಜು ಯೋಜನೆಯ ಜಲರೇಚಕ ಯಂತ್ರಗಾರಗಳ ಸ್ಥಗಿತತೆಯಿಂದ ಕಾವೇರಿ ನೀರು ಸರಬರಾಜುವಿನಲ್ಲಿ ವ್ಯತ್ಯಯವಾಗಲಿದ್ದು, ನಾಗರಿಕರು ಮುಂಜಾಗ್ರತೆಯಾಗಿ ಅಗತ್ಯವಿರುವ ನೀರನ್ನು ಸಂಗ್ರಹಣೆ ಮಾಡಿಟ್ಟುಕೊಳ್ಳಲು ಅಧ್ಯಕ್ಷರು ಕೋರಿದ್ದಾರೆ.
ಜಲರೇಚಕ ಯಂತ್ರಗಾರಗಳ ಸ್ಥಗಿತತೆಯಿಂದ ಕಾವೇರಿ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿರುವ ಪ್ರದೇಶಗಳ ವಿವರ: ಮಾಗಡಿ ರಸ್ತೆ, ಕದ್ರೆನಹಳ್ಳಿ, ಮಿನಜ್ ನಗರ, ಗಂಗಾಧರ ನಗರ, ಪ್ರಗತಿಪುರ, ಪದ್ಮನಾಭ ನಗರ, ಆರ್.ಕೆ ಲೇಔಟ್, ಚಿಕ್ಕಲ್ಲಸಂದ್ರ, ಹನುಮಗಿರಿ ನಗರ, ಮುನೇಶ್ವರ ನಗರ, ಬೇಂದ್ರೆನಗರ, ಕುಮಾರಸ್ವಾಮಿ ಬಡಾವಣೆ 1ನೇ ಮತ್ತು 2ನೇ ಹಂತ, ಚಂದ್ರನಗರ, ಮಾರುತಿ ಬಡಾವಣೆ, ವಿಠ್ಠಲ್ ನಗರ, ಇಸ್ರೋ ಬಡಾವಣೆ, ಟೀಚರ್ಸ್ ಕಾಲೋನಿ, ಯಲಚೇನಹಳ್ಳಿ, ಕನಕಪುರ ಮುಖ್ಯರಸ್ತೆ, ಇಲಿಯಾಸ್ ನಗರ, ಪೂರ್ಣ ಪ್ರಜ್ಞಾ ಲೇಔಟ್, ಉತ್ತರಹಳ್ಳಿ, ಕೆ.ಎಸ್.ಆರ್.ಟಿ.ಸಿ ಬಡಾವಣೆ, ಅಂಕಪ್ಪ ಬಡಾವಣೆ, ಗುಮ್ಮಯ್ಯ ಬಡಾವಣೆ, ಬನಶಂಕರಿ 5ನೇ ಹಂತ, ಎ.ಜಿ.ಎಸ್ ಬಡಾವಣೆ, ಸಾರ್ವಭೌಮನಗರ ಸುಬ್ರಮಣ್ಯಪುರ, ಬಿ.ಹೆಚ್.ಸಿ.ಎಸ್ ಬಡಾವಣೆ, ಕೆನರಾ ಬ್ಯಾಂಕ್ ಕಾಲೋನಿ, ಕಾಕತೀಯ ನಗರ,ಸುದಗುಂಟ ಪಾಳ್ಯ, ಮಾರುತಿ ನಗರ, ಭವಾನಿ ಲೇಔಟ್, ವೆಂಟೇಶ್ವರ ಲೇಔಟ್, ಬೃಂದಾವನ ಲೇಔಟ್, ಮಡಿವಾಳ, ಚಿನ್ನಮ್ಮ ಲೇಔಟ್, ಕೋರಮಂಗಲ 2,4,5,6,7 &8 ನೇ ಬ್ಲಾಕ್, ಚಿಕ್ಕಆಡುಗೋಡಿ, ಸೆಂಟ್ ಜಾನ್ ಆಸ್ಪತ್ರೆ, ರಾಜೇಂದ್ರ ನಗರ, ಆಡುಗೋಡಿ, ಜಾನ್ಸ್‍ನ್ ಮಾರ್ಕೆಟ್, ಸಿಎಲ್‍ಆರ್, ಶಾಂತಿನಗರ, ಲಾಗ್ ಪೋರ್ಡ್ ಟೌನ್, ಎಂಜಿ ರಸ್ತೆ, ರಿಚ್‍ಮಂಡ್ ಟೌನ್, ನೀಲಸಂದ್ರ, ಅಶೋಕ್ ನಗರ, ಆಸ್ಟಿನ್ ಟೌನ್, ವಿವೇಕ್ ನಗರ, ಈಜಿಪುರ, ದೊಮ್ಮಲೂರು ಲೇಔಟ್, ದೊಮ್ಮಲೂರು ವಿಲೇಜ್, ಕೋಡಿಹಳ್ಳಿ, ಕಮಾಂಡೋ ಆಸ್ಪತ್ರೆ, ಜೋಗಿಪಾಳ್ಯ, ಕೇಂಬ್ರಿಡ್ಜ್ ಲೇಔಟ್ ಚಾಮರಾಜಪೇಟೆ, ಶ್ರೀನಗರ ಬಿಎಸ್‍ಕೆ 1ನೇ ಹಂತ, ಅಶೋಕ್ ನಗರ ಪೈಪ್ ಲೈನ್ ರಸ್ತೆ, ಜಯನಗರ 4ನೇ ‘ಟಿʼ ಬ್ಲಾಕ್, ತಿಲಕ್ ನಗರ, ಮಾಧವನ ಪಾರ್ಕ್, ಹೊಂಬೇಗೌಡ ನಗರ,ಲಕ್ಕಸಂದ್ರ, ಶಾಂತಿನಗರ ಲೇಔಟ್, ಜೆಕೆಪುರ, ಅಕ್ಕಿತಿಮ್ಮನ ಹಳ್ಳಿ, ಜಗಜೀವನರಾಮನಗರ, ರುದ್ರಪ್ಪ ಗಾರ್ಡನ್, ವಾಲ್ಮೀಕಿ ನಗರ, ಮಾವಳ್ಳಿ, ಶಂಕರಪುರಂ, ಕೆಂಪೇಗೌಡನಗರ, ಸುಧಾಮನಗರ, ಬನಗಿರಿ, ಜಯನಗರ, 6,7 ಮತ್ತು 8ನೇ ಬ್ಲಾಕ್, ಯಡಿಯೂರು, ಇಟ್ಟಮಡು, ಎಸ್‍ಬಿಎಂ ಕಾಲೋನಿ, ಹೊಸಕೆರೆಹಳ್ಳಿ, ಐಟಿಐ ಲೇಔಟ್, ಶ್ರೀನಿವಾಸ ನಗರ, ಡಿಸೋಜಾ ನಗರ, ಕೆರೆಕೋಡಿ, ಮುನೇಶ್ವರ ನಗರ, ಜೆಪಿನಗರ 1, 2 & 3ನೇ ಹಂತ, ಮಾರೇನಹಳ್ಳಿ, ಜಯನಗರ 5 ಮತ್ತು 9 ನೇ ಬ್ಲಾಕ್, ಭೈರಸಂದ್ರ, ಎಲ್ ಐ ಸಿ ಕಾಲೋನಿ, ಸಿದ್ದಾಪುರ, ವಿಲ್ಸ್‍ನ್ ಗಾರ್ಡನ್, ನಿಮಾನ್ಸ್ ಆಸ್ಪತ್ರೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು ನೀರು ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಅಗತ್ಯ ನೀರನ್ನು ಶೇಕರಣೆ ಮಾಡಿಟ್ಟುಕೊಳ್ಳುವಂತೆ ಜಲಮಂಡಳಿಯ ಅಧ್ಯಕ್ಷರಾದ ಡಾ.ರಾಮ್ ಪ್ರಸಾತ್ ಮನೋಹರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.