ಮನರೇಗ ಕಾಯ್ದೆ- ಹಕ್ಕು ಮತ್ತು ಬೇಡಿಕೆ ಆಧಾರಿತ ಕಾಯ್ದೆ- ಎಸ್.ಎನ್ ನಾರಾಯಣಸ್ವಾಮಿ

varthajala
0

 ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯ್ದೆಯಲ್ಲಿ ಉದ್ಯೊಗವು ಪ್ರತಿಯೊಬ್ಬ ವ್ಯಕ್ತಿಯ ಹಕ್ಕು ಮತ್ತು ಬೇಡಿಕೆ ಆಧಾರಿತವಾಗಿತ್ತು ಎಂದು ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಮುಖ್ಯಮಂತ್ರಿಗಳ ನಿರ್ಣಯಕ್ಕೆ ಬೆಂಬಲ ವ್ಯಕ್ತಪಡಿಸಿ ಮಾತನಾಡಿದರು.ಕೇಂದ್ರ ಸರ್ಕಾರದ 'ವಿಬಿ-ಗ್ರಾಮ್ ಜಿ' ಕಾಯ್ದೆಯಲ್ಲಿ ಕೇಂದ್ರ ಸರ್ಕಾರ ರೂಪಿಸುವ ಮಾನದಂಡಗಳ ಹಂಗಿಗೆ ಒಳಪಡಿಸಿ ಜನರ ಹಕ್ಕನ್ನು ಕಸಿದುಕೊಳ್ಳಲಾಗಿದೆ ಎಂದರು. ಗ್ರಾಮಸಭೆಗಳ ಅಧಿಕಾರವನ್ನು ಕಸಿದುಕೊಂಡಿದೆ. ಮಾಧ್ಯಮಗಳನ್ನು ಹೊಸ ಕಾಯಿದೆಯ ಅನಾನುಕೂಲಗಳು ಹಾಗೂ ಮನರೇಗಾ ಕಾಯಿದೆಯಲ್ಲಿನ ಅನುಕೂಲಗಳನ್ನು ಜನರಿಗೆ ಮನವರಿಕೆ ಮಾಡಿಕೊಡಬೇಕು.


'ವಿಬಿ-ಗ್ರಾಮ್ ಜಿ' ಕಾಯ್ದೆಯು ಹೊಡೆ ಬಡಿಯುವ ಕಾಯ್ದೆಯಾಗಿದೆ ಎಂದರು.

ಮಹಾತ್ಮಗಾಂಧಿ ಹೆಸರನ್ನು ತೆಗೆದು 'ವಿಬಿ-ಗ್ರಾಮ್ ಜಿ' ಕಾಯ್ದೆಯನ್ನು ಜಾರಿಗೆ ತಂದಿರುವುದು ದೇಶಕ್ಕೆ ಮಾಡಿರುವ ಅಪಚಾರ- ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯ್ದೆಯನ್ನು ರದ್ದುಗೊಳಿಸಿ ವಿಬಿ-ಗ್ರಾಮ್-ಜಿ- ಕಾಯ್ದೆಯನ್ನು ಜಾರಿಗೆ ತಂದು ಮಹಾತ್ಮ ಗಾಂಧೀಜಿಯವರ ಹೆಸರನ್ನು ತೆಗೆದಿರುವುದು ಅಪಚಾರ. ವಿಬಿ-ಗ್ರಾಮ್-ಜಿ ಕಾಯ್ದೆಯಲ್ಲಿ ರಾಮನ ಹೆಸರನ್ನು ತರುವುದಕ್ಕೆ ಪ್ರಯತ್ನ ಮಾಡಲಾಗಿದೆ ಎಂದು ತಿಳಿಸಿ ಮುಖ್ಯಮಂತ್ರಿಗಳು ಮಂಡಿಸಿರುವ ನಿರ್ಣಯಕ್ಕೆ ಬೆಂಬಲ ವ್ಯಕ್ತಪಡಿಸಿದರು.

 ಗ್ರಾಮೀಣ ಬುಡಕಟ್ಟುಗಳಿಗೆ ಆರ್ಥಿಕ ಭದ್ರತೆ ನೀಡುವ ಸಲುವಾಗಿ 2005ರಲ್ಲಿ ಅಂದಿನ ಡಾ: ಮನಮೋಹನ್ ಸಿಂಗ್ ನೇತೃತ್ವದ ಯು.ಪಿ.ಎ ಸರ್ಕಾರವು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯ್ದೆಯನ್ನು ಜಾರಿಗೆ ತಂದಿತ್ತು. ಹಿಂದಿನ ಬಿ.ಜೆ.ಪಿ ಸರ್ಕಾರಗಳು ಸಹ ಈ ಯೋಜನೆಯನ್ನು ಹೊಗಳಿದ್ದಾರೆ. ಕೇಂದ್ರ ಸರ್ಕಾರವು ರಾಮನ ಹೆಸರನ್ನು ಕಾಯ್ದೆಯಲ್ಲಿ ತರಲು ಪ್ರಯತ್ನ ಪಟ್ಟಿದೆ. ಆದರೆ ಕೇಂದ್ರ ಸರ್ಕಾರದವರು ರಾಮನ ಹೆಸರನ್ನು ಬದನಾಮ್ ಮಾಡುತ್ತಿದ್ದಾರೆ ಎಂದರು.ಹೊಸ ಕಾಯ್ದೆಯನುಸಾರ ಕೇಂದ್ರ ಸರ್ಕಾರ ನಿಗದಿಪಡಿಸಿದ ದಿನಗಳಲ್ಲಿ ರೈತರು ಕೆಲಸ ಮಾಡಬೇಕು. ಮನರೇಗಾ ಯೋಜನೆಯಲ್ಲಿ ಕಾರ್ಮಿಕರಿಗೆ, ಮಹಿಳೆಯರಿಗೆ ಅನುಕೂಲಕರವಾದ ಕಾಯ್ದೆಯಾಗಿತ್ತು. ಆದರೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಗ್ರಾಮ್-ಜಿ- ಕಾಯ್ದೆಯು ಕಾರ್ಮಿಕರಿಗೆ, ಮಹಿಳೆಯರಿಗೆ, ಕೃಷಿ ಕಾರ್ಮಿಕರಿಗೆ, ರೈತರಿಗೆ ಯಾವುದೇ ಅನುಕೂಲವಿರುವುದಿಲ್ಲ. ಒಕ್ಕೂಟ ತತ್ವಕ್ಕೆ ವಿರೋಧವಾಗಿರುವ ಮತ್ತು ರಾಜ್ಯದ ಬೊಕ್ಕಸಕ್ಕೆ ತೀವ್ರ ಹೊರತೆ ಉಂಟುಮಾಡುವ ಮತ್ತು ವಿಕೇಂದ್ರೀಕರಣ ತತ್ವಕ್ಕೆ ವಿರುದ್ಧವಾಗಿರುವ ಗ್ರಾಮಪಂಚಾಯಿತಿಗಳ ಅಧಿಕಾರ ಮತ್ತು ಹಕ್ಕುಗಳನ್ನು ಕಸಿದುಕೊಂಡಿರುವ ಕಾಯ್ದೆಯನ್ನು ಕೂಡಲೇ ರದ್ದು ಮಾಡಬೇಕು ಎಂದರು.

ಡಾ: ಮನಮೋಹನ್ ಸಿಂಗ್ ನೇತೃತ್ವದ ಮನರೇಗಾ ಕಾಯ್ದೆ- ಉದ್ಯೋಗ ಖಾತ್ರಿ ಕಾಯ್ದೆ-ದೇಶದಲ್ಲಿ ಕ್ರಾಂತಿಕಾರಿ ಬದಲಾವಣೆ- ಶಾಸಕ ರಿಜ್ವಾನ್ ಅರ್ಷದ್ 2005ರಲ್ಲಿ ಡಾ: ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರವು ಮನರೇಗಾ ಉದ್ಯೋಗ ಖಾತ್ರಿ ಕಾಯ್ದೆಯನ್ನು ಜಾರಿಗೆ ತಂದಿತ್ತು. ಈ ಯೋಜನೆಯು ನಿರುದ್ಯೋಗ ನಿರ್ಮೂಲನೆ, ವಲಸೆ ತಡೆ, ಲಿಂಗ ತಾರತಮ್ಯವಿಲ್ಲದೇ ವೇತನ ನೀಡುವಿಕೆ, ಪಂಚಾಯತ್ ವಿಕೇಂದ್ರಿಕರಣದ ಬಲವರ್ಧನೆ ಹಾಗೂ ಗ್ರಾಮೀಣ ಜನರ ವೈಯಕ್ತಿಯ ಹಾಗೂ ಸಮುದಾಯ ಆಸ್ತಿಗಳ ಸೃಜನೆಯಿಂದ ಕ್ರಾಂತಿಕಾರಿ ಬದಲಾವಣೆ ತಂದಿತ್ತು ಎಂದು ಶಿವಾಜಿನಗರ ಶಾಸಕ ರಿಜ್ವಾನ್ ಅರ್ಷದ್ ಮುಖ್ಯಮಂತ್ರಿಗಳ ನಿರ್ಣಯಕ್ಕೆ ಬೆಂಬಲ ವ್ಯಕ್ತಪಡಿಸಿ ಮಾತನಾಡಿದರು. ಇಂದು ವಿಧಾನಸಭೆಯಲ್ಲಿ ಮಾತನಾಡಿದ ಶಾಸಕರು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಗ್ರಾಮ್-ಜಿ- ಕಾಯ್ದೆಯು ದೇಶದ 11 ಕೋಟಿ ಕಾರ್ಮಿಕರಿಗೆ ವಿರುದ್ಧವಾಗಿದೆ. ಈ ಕಾಯ್ದೆಯು ಕೇವಲ ಗುತ್ತಿಗೆದಾರರು ಮತ್ತು ಕಾರ್ಪೋರೇಟ್ ಕಂಪೆನಿಗಳಿಗೆ ಲಾಭ ಮಾಡಿಕೊಡುವ ಯೋಜನೆಯಾಗಿ ಮಾರ್ಪಟ್ಟಿದೆ. ರೈತಾಪಿ ಜನರ ಹಕ್ಕುಗಳನ್ನು ಕಸಿದುಕೊಳ್ಳಲಾಗಿದೆ. ಗ್ರಾಮೀಣ ಭಾಗದ ಕೂಲಿ ಕಾರ್ಮಿಕರನ್ನು ಆಧುನಿಕ ಗುಲಾಮಗಿರಿಗೆ ತಳ್ಳುವ ಪ್ರಯತ್ನ ಮಾಡಿದೆ ಎಂದರು. ರಾಜ್ಯ ಸರ್ಕಾರಗಳೊಂದಿಗೆ ಚರ್ಚಿಸದೇ ಈ ಯೋಜನೆ ಜಾರಿಗೆ ತಂದಿರುವುದು ಸಮಂಜಸವಾದ ಪ್ರಕ್ರಿಯೆ ಅಲ್ಲ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯ್ದೆಯನ್ನು ರದ್ದುಗೊಳಿಸಿ ಕೇಂದ್ರ ಸರ್ಕಾರವು ಏಕ ಪಕ್ಷೀಯವಾಗಿ ಜಾರಿಗೆ ತಂದಿರುವ ವಿಬಿ-ಗ್ರಾಮ್ ಜಿ ಕಾಯ್ದೆಯನ್ನು ಕೂಡಲೇ ರದ್ದುಗೊಳಿಸಬೇಕು. ಇಲ್ಲವಾದಲ್ಲಿ ಹೋರಾಟ ನಡೆಸಲಾಗುವುದು ಎಂದು ತಮ್ಮ ಬೆಂಬಲ ವ್ಯಕ್ತಪಡಿಸಿ ಮಾತನಾಡಿದರು.

Post a Comment

0Comments

Post a Comment (0)