ಬಾಲ ಕಾರ್ಮಿಕ ನಿರ್ಮೂಲನಾ ಯೋಜನಾ ಸೊಸೈಟಿಯ ಮರುನಾಮಕರಣ ಮತ್ತು ವ್ಯಾಪ್ತಿಯ ವಿಸ್ತರಣೆ

varthajala
0

 ಬೆಂಗಳೂರು : ರಾಜ್ಯದಲ್ಲಿ ಬಾಲ ಕಾರ್ಮಿಕ ಪದ್ಧತಿಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವ ಮತ್ತು ವಲಸೆ ಕಾರ್ಮಿಕರ ಕಲ್ಯಾಣವನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಕಾರ್ಮಿಕ ಇಲಾಖೆಯು ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಈ ಹಿಂದೆ ಅಸ್ತಿತ್ವದಲ್ಲಿದ್ದ “ಕರ್ನಾಟಕ ರಾಜ್ಯ ಬಾಲ ಹಾಗೂ ಕಿಶೋರ ಕಾರ್ಮಿಕ ಪದ್ಧತಿ ನಿರ್ಮೂಲನಾ ಯೋಜನಾ ಸೊಸೈಟಿ”ಯ (KSCLEPS) ಹೆಸರನ್ನು ಬದಲಾಯಿಸಿ, ಅದರ ಕಾರ್ಯವ್ಯಾಪ್ತಿಯನ್ನು ಮತ್ತಷ್ಟು ವಿಸ್ತರಿಸಲಾಗಿದೆ.ಇನ್ನು ಮುಂದೆ ಈ ಸಂಸ್ಥೆಯು “ಕರ್ನಾಟಕ ರಾಜ್ಯ ಬಾಲ ಹಾಗೂ ಕಿಶೋರ ಕಾರ್ಮಿಕರ ಮತ್ತು ವಲಸೆ ಕಾರ್ಮಿಕರ ಕಲ್ಯಾಣ ಮತ್ತು ಪುನರ್ವಸತಿ ಸೊಸೈಟಿ” ಎಂದು ಅಧಿಕೃತವಾಗಿ ಗುರುತಿಸಲ್ಪಡುತ್ತದೆ.

ಕಾರ್ಯವ್ಯಾಪ್ತಿ:ಕೇವಲ ಬಾಲ ಕಾರ್ಮಿಕರ ನಿರ್ಮೂಲನೆಗೆ ಸೀಮಿತವಾಗಿದ್ದ ಸೊಸೈಟಿಯು, ಇನ್ನು ಮುಂದೆ ರಾಜ್ಯದಾದ್ಯಂತ ಇರುವ ವಲಸೆ ಕಾರ್ಮಿಕರ ಸಾಮಾಜಿಕ ಭದ್ರತೆ, ಕಲ್ಯಾಣ ಮತ್ತು ಅವರ ಕುಟುಂಬಗಳ ಶೈಕ್ಷಣಿಕ ಅಭಿವೃದ್ಧಿಗೂ ಆದ್ಯತೆ ನೀಡಲಿದೆ.

ಪುನರ್ವಸತಿ ಸೌಲಭ್ಯ:ರಕ್ಷಿಸಲ್ಪಟ್ಟ ಬಾಲ ಕಾರ್ಮಿಕರಿಗೆ ಮತ್ತು ಸಂಕಷ್ಟದಲ್ಲಿರುವ ವಲಸೆ ಕಾರ್ಮಿಕರಿಗೆ ಸುಸಜ್ಜಿತ ಪುನರ್ವಸತಿ ಸೌಲಭ್ಯಗಳನ್ನು ಒದಗಿಸಲು ಈ ಹೊಸ ಯೋಜನೆಯಡಿ ಕ್ರಮ ಕೈಗೊಳ್ಳಲಾಗುವುದು.

ಜಾಗೃತಿ ಕಾರ್ಯಕ್ರಮ:ಸಾರ್ವಜನಿಕರು ಬಾಲ ಕಾರ್ಮಿಕ ಪದ್ಧತಿಯ ವಿರುದ್ಧ ಮತ್ತು ವಲಸೆ ಕಾರ್ಮಿಕರ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಲು ಜಿಲ್ಲಾ ಮಟ್ಟದಲ್ಲಿ ವಿಶೇಷ ಅಭಿಯಾನಗಳನ್ನು ಹಮ್ಮಿಕೊಳ್ಳಲಾಗುವುದು.
ಬಾಲ ಕಾರ್ಮಿಕ ಪದ್ಧತಿಯು ಶಿಕ್ಷಾರ್ಹ ಅಪರಾಧವಾಗಿದ್ದು, ಸಾರ್ವಜನಿಕರು ಇಂತಹ ಪ್ರಕರಣಗಳು ಕಂಡುಬಂದಲ್ಲಿ ತಕ್ಷಣವೇ ಇಲಾಖೆಯ ಸಹಾಯವಾಣಿ ಸಂಖ್ಯೆಗೆ ಅಥವಾ ಹತ್ತಿರದ ಕಾರ್ಮಿಕ ಅಧಿಕಾರಿಯ ಕಚೇರಿಗೆ ಮಾಹಿತಿ ನೀಡುವಿದು.
ಹೆಚ್ಚಿನ ಮಾಹಿತಿಗಾಗಿ, ಕಾರ್ಮಿಕ ಆಯುಕ್ತರ ಕಚೇರಿ, ಕಾರ್ಮಿಕ ಭವನ, ಬನ್ನೇರುಘಟ್ಟ ರಸ್ತೆ, ಬೆಂಗಳೂರು, ದೂರವಾಣಿ ಸಂಖ್ಯೆ 080-29753078 ಅಥವಾ ಇ-ಮೇಲ್ ವಿಳಾಸ labourcommissioner42@gmail.com ಗೆ ಸಂಪರ್ಕಿಸಬಹುದು ಎಂದು ಕಾರ್ಮಿಕ ಇಲಾಖೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Post a Comment

0Comments

Post a Comment (0)