ಕೇಂದ್ರ ಸರ್ಕಾರ ಜಾರಿಗೆ ತಂದಿರುವ 'ವಿಬಿ-ಗ್ರಾಮ್ ಜಿ' ಕಾಯ್ದೆ- ಪರೋಕ್ಷವಾಗಿ ಗುತ್ತಿಗೆದಾರರು ಮತ್ತು ಕಾಪೆರ್Çೀರೇಟ್ ಕಂಪನಿಗಳಿಗೆ ಲಾಭ ಮಾಡಿಕೊಡುವ ಯೋಜನೆಯಾಗಿ ಮಾರ್ಪಟ್ಟಿದೆ. ಇದು ಬಡವರ ಕೈಯಿಂದ ಅನ್ನ ಕಸಿದುಕೊಂಡು ಉಳ್ಳವರನ್ನು ಇನ್ನಷ್ಟು ಶ್ರೀಮಂತರನ್ನಾಗಿ ಮಾಡುವ ಯೋಜನೆಯಾಗಿದೆ ಎಂದು ಮುಖ್ಯಮಂತ್ರಿಗಳ ನಿರ್ಣಯಕ್ಕೆ ಬೆಂಬಲ ಸೂಚಿಸಿ ಅರಸೀಕೆರೆ ಶಾಸಕ ಸಿ.ಎಂ. ಶಿವಲಿಂಗೇಗೌಡ ಮಾತನಾಡಿದರು.
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತಿ ಕಾಯ್ದೆಯಡಿ ನಮ್ಮ ಹೊಲ-ನಮ್ಮ ದಾರಿ, ದನದ ಕೊಟ್ಟಿಗೆ, ಕುರಿ ದೊಡ್ಡಿ, ಕಣ, ಶಾಲಾ ಕಾಂಪೌಂಢ್, ಶೌಚಾಲಯ, ಬದು, ಹೊಳಗಟ್ಟಿ, ಪಂಚಾಯಿತಿ ಕಟ್ಟಡ, ಆಟದ ಮೈದಾನದಂತಹ ಸ್ಥಳೀಯವಾಗಿ ಅಗತ್ಯವಿರುವ ಗ್ರಾಮೀಣ ಆಸ್ತಿಗಳನ್ನು ನಿರ್ಮಿಸಲಾಗುತ್ತಿತ್ತು. ಮಹಾತ್ಮ ಗಾಂಧೀಜಿ ಕನಸನ್ನ ನನಸು ಮಾಡಲಿಕ್ಕೆ ಮನಮೋಹನ್ ಸಿಂಗ್ ಮನರೇಗ ಕಾಯ್ದೆಯನ್ನು ಜಾರಿಗೆ ತಂದಿದ್ದರು. ರಾಜ್ಯಗಳ ಜೊತೆ ಸಮಾಲೋಚಿಸದೇ, ಕೇಂದ್ರವು ಏಕಾಏಕಿ ರಾಜ್ಯ ಸರ್ಕಾರಗಳು ಶೇ 40 ರಷ್ಟು ಅನುದಾನವನ್ನು ಭರಿಸಬೇಕೆಂಬ ನಿಯಮ ಹೇರಿರುವುದು ಸರಿಯಾದ ಕ್ರಮವಲ್ಲ. ಮನರೇಗ ಕಾಯ್ದೆಯಲ್ಲಿ ಉದ್ಯೋಗವು ಪ್ರತಿಯೊಬ್ಬ ವ್ಯಕ್ತಿಯ ಹಕ್ಕು ಹಾಗೂ ಬೇಡಿಕೆ ಆಧಾರಿತವಾಗಿತ್ತು. ಆದರೆ ಹೊಸ ಕಾಯ್ದೆಯಲ್ಲಿ ಇದನ್ನು ಕೇಂದ್ರ ಸರ್ಕಾರ ರೂಪಿಸುವ ಮಾನದಂಡಗಳ ಹಂಗಿಗೆ ಒಳಪಡಿಸಿ ಜನರ ಹಕ್ಕು, ಗ್ರಾಮಸಭೆಗಳ ಅಧಿಕಾರಳಗಳನ್ನು ಕಸಿದುಕೊಳ್ಳಲಾಗಿದೆ. ಗ್ರಾಮ ಪಂಚಾಯಿತಿಗಳು ತಮ್ಮ ಅಗತ್ಯಕ್ಕೆ ತಕ್ಕಂತೆ ಕಾಮಗಾರಿಗಳನ್ನು ಆಯ್ಕೆ ಮಾಡುವ ಸ್ವಾತಂತ್ರ್ಯವನ್ನು ಕಳೆದುಕೊಡಿವೆ. ಕೇಂದ್ರ ಸರ್ಕಾರ ಆಯ್ಕೆ ಮಾಡಿದ ಪಂಚಾಯಿತಿಗಳಲ್ಲಿ ಮಾತ್ರ ಯೋಜನೆ ಜಾರಿಯಾಗುತ್ತಿರುವುದು ಸರಿಯಾದುದಲ್ಲ ಎಂದರು. ಕೇಂದ್ರ ಸರ್ಕಾರ ಕಾಂಗ್ರೆಸ್ ಸರ್ಕಾರದ ಯೋಜನೆಗಳನ್ನು ಬದಲಾವಣೆ ಮಾತ್ರ ಮಾಡುತ್ತಿದೆ. ಕೇಂದ್ರ ಸರ್ಕಾರದ ಯಾವುದೇ ಯೋಜನೆಗಳು ಪರಿಣಾಮಕಾರಿಯಾಗಿ ಅನುμÁ್ಠನವಾಗುತ್ತಿಲ್ಲ ಎಂದು ತಿಳಿಸಿದರು