ಹಿರಿಯ ರಾಜಕಾರಣಿ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ

varthajala
0

 ಬೆಂಗಳೂರು : ಮಾಜಿ ಶಾಸಕ ಮತ್ತು ಹಿರಿಯ ರಾಜಕಾರಣಿ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರ ನಿಧನದಿಂದ ಆಘಾತಕ್ಕೀಡಾಗಿದ್ದೇನೆ. ಸ್ನೇಹಿತರಾಗಿದ್ದ ಹೆಗ್ಡೆ ಅವರು ಮತ್ತು ನಾನು 1983ರಲ್ಲಿ ವಿಧಾನಸಭೆಯಲ್ಲಿ ಸದಸ್ಯರಾಗಿದ್ದೆವು. ರಾಜಕೀಯ ಕ್ಷೇತ್ರವನ್ನು ಸಮಾಜದ ಸೇವೆ ಮಾಡಲು ಒದಗಿ ಬಂದ ಅವಕಾಶ ಎಂದು ಬಯಸಿದ್ದ ಅಪ್ಪಣ್ಣ ಹೆಗ್ಡೆ ಅವರು ಸರಳ, ಸಜ್ಜನಿಕೆಯ ಮನುಷ್ಯ. ಒಂದು ಕಾಲದಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜನತಾದಳವನ್ನು ಕಟ್ಟಿ ಬೆಳೆಸಿದವರು.

ಅವರ ನಿರ್ಗಮನದಿಂದ ಹಳೆಯ ತಲೆಮಾರಿನ ಮತ್ತೊಬ್ಬ ರಾಜಕಾರಣಿ ನಮ್ಮಿಂದ ದೂರವಾದಂತೆ ಆಗಿದೆ. ಅವರ ಬದುಕು ಮತ್ತು ಸಾಧನೆ ಯುವ ರಾಜಕಾರಣಿಗಳಿಗೆ ಮಾದರಿಯಾಗಿದೆ. ಅವರ ಕುಟುಂಬದ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ. ಬಸ್ರೂರು ಅಪ್ಪಣ್ಣ ಹೆಗ್ಡೆ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ. ಅವರ ಕುಟುಂಬ ವರ್ಗದವರಿಗೆ ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಸಂತಾಪವನ್ನು ವ್ಯಕ್ತಪಡಿಸಿದ್ದಾರೆ.

Post a Comment

0Comments

Post a Comment (0)