ಹಿರಿಯ ಪತ್ರಕರ್ತ, ಮಾಜಿ ವಿಧಾನ ಪರಿಷತ್ ಸದಸ್ಯ ರಾಮಯ್ಯ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಂತಿಮ ನಮನ

varthajala
0

 ಬೆಂಗಳೂರು : ಹಿರಿಯ ಪತ್ರಕರ್ತರು ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯರಾದ ರಾಮಯ್ಯ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತೀವ್ರ ಸಂತಾಪ ವ್ಯಕ್ತಪಡಿಸಿ, ಮೃತರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು.

ಬೆಂಗಳೂರಿನಲ್ಲಿ ರಾಮಯ್ಯ ಅವರ ಪಾರ್ಥಿವ ಶರೀರಕ್ಕೆ ಪುಷ್ಪಗುಚ್ಛವನ್ನಿಟ್ಟು ಗೌರವ ಸಲ್ಲಿಸಿದ ಮುಖ್ಯಮಂತ್ರಿಗಳು, ಬಳಿಕ ಅವರ ಕುಟುಂಬದ ಸದಸ್ಯರನ್ನು ಭೇಟಿ ಮಾಡಿ ಸಾಂತ್ವನ ಹೇಳಿದರು. ರಾಮಯ್ಯ ಅವರು ಪತ್ರಿಕೋದ್ಯಮ ಮತ್ತು ಸಾರ್ವಜನಿಕ ಜೀವನದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದವರು. ಅವರ ಅಗಲಿಕೆ ನಾಡಿಗೆ ತುಂಬಲಾರದ ನಷ್ಟ ಎಂದು ಈ ಸಂದರ್ಭದಲ್ಲಿ ಸ್ಮರಿಸಿದರು.ಈ ಸಂದರ್ಭದಲ್ಲಿ ಶಿವಾಜಿನಗರ ವಿಧಾನ ಸಭಾ ಕ್ಷೇತ್ರದ ಶಾಸಕರಾದ ರಿಜ್ವಾನ್ ಅರ್ಷದ್, ಮಲ್ಲೇಶ್ವರಂ ವಿಧಾನ ಸಭಾ ಕ್ಷೇತ್ರದ ಶಾಸಕರು ಹಾಗೂ ಮಾಜಿ ಸಚಿವರಾದ ಡಾ.ಸಿ.ಎನ್.ಅಶ್ವಥ್ ನಾರಾಯಣ್, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ. ಪ್ರಭಾಕರ್ ಉಪಸ್ಥಿತರಿದ್ದರು.

Post a Comment

0Comments

Post a Comment (0)