ಹಿರಿಯ ಪತ್ರಕರ್ತ ಪಿ. ರಾಮಯ್ಯ ಅವರ ನಿಧನಕ್ಕೆ ವಾರ್ತಾ ಇಲಾಖೆಯ ಆಯುಕ್ತ ಹೇಮಂತ್ ಎಂ. ನಿಂಬಾಳ್ಕರ್ ಸಂತಾಪ

varthajala
0

 ಬೆಂಗಳೂರು :ಹಿರಿಯ ಪತ್ರಕರ್ತರು ಹಾಗೂ ವಿಧಾನ ಪರಿಷತ್ತಿನ ಮಾಜಿ ಸದಸ್ಯರಾದ ಪಿ. ರಾಮಯ್ಯ ಅವರ ನಿಧನಕ್ಕೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಹೇಮಂತ್ ಎಂ. ನಿಂಬಾಳ್ಕರ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.ಐದು ದಶಕಗಳಿಗೂ ಅಧಿಕ ಕಾಲ ‘ದಿ ಹಿಂದೂ’ ಪತ್ರಿಕೆಯ ಮೂಲಕ ಮೌಲ್ಯಾಧಾರಿತ ಪತ್ರಿಕೋದ್ಯಮವನ್ನು ನಡೆಸಿಕೊಟ್ಟ ಪಿ. ರಾಮಯ್ಯ ಅವರು ರಾಜ್ಯದ ಹಿತಾಸಕ್ತಿಯನ್ನು ಸದಾ ಪರಮೋಚ್ಚವಾಗಿ ಪರಿಗಣಿಸಿದ್ದರು.

 ರಾಜಕೀಯ, ಇತಿಹಾಸ, ಸಂಸ್ಕøತಿ ಹಾಗೂ ಸಾಮಾಜಿಕ ವಿಷಯಗಳ ಕುರಿತು ಅವರಿಗಿದ್ದ ಆಳವಾದ ಜ್ಞಾನ ಮತ್ತು ಪಾಂಡಿತ್ಯ ಆದರ್ಶಪ್ರಾಯವಾಗಿತ್ತು.ವಿಧಾನ ಪರಿಷತ್ ಸದಸ್ಯರಾಗಿದ್ದ ಅವಧಿಯಲ್ಲಿ, ಸಣ್ಣ ಪತ್ರಿಕೆಗಳ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತಂದು, ಅವುಗಳಿಗೆ ಪರಿಹಾರ ದೊರಕಿಸುವಲ್ಲಿ ಅವರು ಪ್ರಾಮಾಣಿಕವಾಗಿ ಶ್ರಮಿಸಿದ್ದರು.ಸಾರ್ವಜನಿಕ ಜೀವನದಲ್ಲಿಯೂ ಹಾಗೂ ಶಾಸನಸಭೆಯ ಕಲಾಪಗಳಲ್ಲಿಯೂ ಅವರು ತೋರಿದ ವೈಚಾರಿಕ ಸ್ಪಷ್ಟತೆ ಮತ್ತು ಸಮಾಜದ ಬಗೆಗಿನ ಕಾಳಜಿ ಪ್ರಶಂಸನೀಯವಾಗಿತ್ತು. ಪಿ. ರಾಮಯ್ಯ ಅವರ ನಿಧನದಿಂದ ರಾಜ್ಯವು ಒಬ್ಬ ಜ್ಞಾನವಂತ ಮತ್ತು ಅನುಭವಸಂಪನ್ನ ಮಾರ್ಗದರ್ಶಕನನ್ನು ಕಳೆದುಕೊಂಡಂತಾಗಿದೆ ಎಂದು ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮೃತರ ಆತ್ಮಕ್ಕೆ ಚಿರಶಾಂತಿ ಲಭಿಸಲಿ ಹಾಗೂ ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಕುಟುಂಬ ವರ್ಗದವರಿಗೆ ಭಗವಂತ ನೀಡಲಿ ಎಂದು ಅವರು ಪ್ರಾರ್ಥಿಸಿದ್ದಾರೆ.

Post a Comment

0Comments

Post a Comment (0)