ಬೆಂಗಳೂರು : ಪರಮಪೂಜ್ಯ ಶ್ರೀ ಶ್ರೀ ವಿದ್ಯಾಶ್ರೀಶತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಮಹಾಶಿವರಾತ್ರಿ ಪ್ರಯುಕ್ತ ಸುಬ್ರಹ್ಮಣ್ಯನಗರದ ಸೋಸಲೆ ಶ್ರೀ ವ್ಯಾಸರಾಜ ಮಠದಲ್ಲಿ ಬೆಳಗ್ಗೆ ವಿಶೇಷ ಪೂಜಾ ಕೈಂಕರ್ಯಗಳು ಜರುಗಿದವು. ಸಂಜೆಯ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಯುವ ಗಾಯಕ ಶ್ರೀ ಕೆ.ಪಿ. ಶಿಶಿರ್ ಅವರು ಅಪರೋಕ್ಷ ಜ್ಞಾನಿಗಳಿಂದ ರಚಿಸಲ್ಪಟ್ಟ ಹಲವಾರು ಅಪರೂಪದ ಹರಿದಾಸರ ಪದಗಳನ್ನು ತಾರತಮ್ಯೋಕ್ತವಾಗಿ ಮತ್ತು ಸುಶ್ರಾವ್ಯವಾಗಿ ಪ್ರಸ್ತುತಪಡಿಸಿದರು. ಇವರ ಗಾಯನಕ್ಕೆ ಕು|| ಸಂಸ್ಕೃತಿ ಬಾಣಾವರ ಹಾರ್ಮೋನಿಯಂ ವಾದನದಲ್ಲಿ ಹಾಗೂ ಶ್ರೀ ಅನಿರುದ್ಧ ಮೃದಂಗ ವಾದನದಲ್ಲಿ ಸಾಥ್ ನೀಡಿದರು.
ಮೆಮೆಂಟೋ ಶ್ರೀ ಕೆ.ಪಿ. ಶ್ರೀಧರ್ ಕಲಾವಿದರನ್ನು ಸನ್ಮಾನಿಸಿದರು. ಹರಿದಾಸ ಸಂಪದ ಟ್ರಸ್ಟಿನ ಗೌರವ ಕಾರ್ಯದರ್ಶಿ ಶ್ರೀ ಎಂ.ವಿ. ಮಧುಸೂದನ್ ವಂದನಾರ್ಪಣೆ ಮಾಡಿದರು. ಶ್ರೀಮಠದ ವಿಚಾರಣಾಕರ್ತರಾದ ಶ್ರೀ ಸೋಸಲೆ ಪ್ರಕಾಶ್ ಅವರು ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ವ್ಯವಸ್ಥೆ ಮಾಡಿದ್ದರು.
