ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯ್ದೆ" ಮರುಸ್ಥಾಪಿಸಬೇಕು- ಶಾಸಕ ಎನ್.ಹೆಚ್ ಎನ್.ಹೆಚ್ ಕೋನರೆಡ್ಡಿ

varthajala
0

 ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯ್ದೆ"ಯನ್ನು ಈ ಹಿಂದಿನಂತೆ ಅದರ ಮೂಲ ಸ್ವರೂಪದಲ್ಲಿಯೇ ಮರುಸ್ಥಾಪಿಸಬೇಕು ಹಾಗೂ ಕೇಂದ್ರ ಸರ್ಕಾರವು ಏಕಪಕ್ಷೀಯವಾಗಿ ಜಾರಿಗೆ ತಂದಿರುವ ಹೊಸ 'ವಿಬಿ-ಗ್ರಾಮ್ ಜಿ' ಕಾಯ್ದೆಯನ್ನು ರದ್ದುಗೊಳಿಸಬೇಕು ಎಂದು ನವಲಗುಂದ ಶಾಸಕ ಎನ್.ಹೆಚ್ ಕೋನಾರೆಡ್ಡಿ ಅವರು ಹೇಳಿದರು.

ಇಂದು ವಿಧಾನಸಭೆಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯ್ದೆ" ಯು ಪಂಚಾಯತ್ ರಾಜ್ ಗೆ ಸಂವಿಧಾನತ್ಮಕ ಸ್ಥಾನಮಾನ ನೀಡಿತ್ತು, ಗ್ರಾಮ ಪಂಚಾಯಿತಿಗಳಿಗೆ ಸಂಪೂರ್ಣ ಅಧಿಕಾರ ನೀಡಲಾಗಿತ್ತು. ಆ ಅಧಿಕಾರವನ್ನು ಕಸಿದುಕೊಳ್ಳುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡಿದೆ ಎಂದು ತಿಳಿಸಿದರು. ಕೇಂದ್ರ ಸರ್ಕಾರವು ಯಾವುದೇ ಯೋಚನೆ ಮಾಡದೇ ರಾಜ್ಯಸರ್ಕಾರಗಳ ಜೊತೆ ಚರ್ಚೆ ಮಾಡದೇ ಜನಾಭಿಪ್ರಾಯ ಪಡೆಯದೇ ಹೊಸ 'ವಿಬಿ-ಗ್ರಾಮ್ ಜಿ' ಕಾಯ್ದೆಯನ್ನು ಜಾರಿಗೆ ತಂದಿದೆ. ಈ ಕಾಯ್ದೆಯು ಒಕ್ಕೂಟ ವ್ಯವಸ್ಥೆಯ ಮೂಲ ಆಶಯಗಳಿಗೆ ಮತ್ತು ಗ್ರಾಮೀಣ ಜನರ ಜೀವನೋಪಾಯದ ಹಕ್ಕಿಗೆ ಮಾರಕವಾಗಿದೆ. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕಾಯಿದೆಯನ್ನು ಹಿಂಪಡೆಯುವವರೆಗೆ ಹೋರಾಟ ಮಾಡಲಾಗುವುದು ಎಂದು ತಿಳಿಸಿದರು.

Post a Comment

0Comments

Post a Comment (0)