ಬೆಂಗಳೂರು : ಮಾನವ ಹಕ್ಕುಗಳ ಸಂರಕ್ಷಣೆ ಮತ್ತು ಹಕ್ಕುಗಳ ಉಲ್ಲಂಘನೆ ಪ್ರಕರಣಗಳಲ್ಲಿ ನೊಂದವರಿಗೆ ತ್ವರಿತ ನ್ಯಾಯ ಒದಗಿಸುವ ನಿಟ್ಟಿನಲ್ಲಿ, ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗವು 2026 ನೇ ಫೆಬ್ರವರಿ 16 ರಿಂದ 20 ರವರೆಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ತನಿಖಾ ಸಭೆಗಳನ್ನು ನಡೆಸಲು ನಿರ್ಧರಿಸಿದೆ.ಈ ಸಮಯದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಸಂಬಂಧಿಸಿದಂತೆ ಆಯೋಗದಲ್ಲಿ ಈಗಾಗಲೇ ದಾಖಲಾಗಿರುವ ಹಳೆಯ ಪ್ರಕರಣಗಳನ್ನು ವಿಚಾರಣೆ ನಡೆಸಿ, ಸ್ಥಳದಲ್ಲೇ ಇತ್ಯರ್ಥಪಡಿಸಲು ಕ್ರಮ ಕೈಗೊಳ್ಳಲಾಗುವುದು.ಸಾರ್ವಜನಿಕರ ಅನುಕೂಲಕ್ಕಾಗಿ ಈ ಪ್ರವಾಸದ ಅವಧಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಗೆ ಸಂಬಂಧಿಸಿದ ಹೊಸ ದೂರು ಮತ್ತು ಅಹವಾಲುಗಳನ್ನು ಸಹ ಸ್ವೀಕರಿಸಲಾಗುವುದು.
ಜಿಲ್ಲಾವಾರು ಸಭೆಯ ವಿವರ:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026 ನೇ ಫೆಬ್ರವರಿ 18 ರಂದು ಹಾಗೂ ಉಡುಪಿ ಜಿಲ್ಲೆಯಲ್ಲಿ ಫೆಬ್ರವರಿ 19 ರಂದು ಸಭೆ ನಡೆಯಲಿದೆ.
ಈ ಸಮಯದಲ್ಲಿ ಸಾರ್ವಜನಿಕರು, ದೂರುದಾರರು ಹಾಗೂ ಪ್ರತಿವಾದಿ ಅಧಿಕಾರಿಗಳು ಆಯೋಗದ ಮಾನ್ಯ ಅಧ್ಯಕ್ಷರು (ಹಂಗಾಮಿ) ಹಾಗೂ ಸದಸ್ಯರನ್ನು ಭೇಟಿ ಮಾಡಿ ಈ ಸೌಲಭ್ಯದ ಸದುಪಯೋಗ ಪಡಿಸಿಕೊಳ್ಳಬುದು ಎಂದು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಪ್ರಭಾರ ಕಾರ್ಯದರ್ಶಿಗಳಾದ ಎ. ದಿನೇಶ್ ಸಂಪತ್ ರಾಜ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.