ರಾಜ್ಯ ಬಾಲ ಕಾರ್ಮಿಕ ನಿರ್ಮೂಲನಾ ಯೋಜನಾ ಸೊಸೈಟಿಯ ಮರುನಾಮಕರಣ ಹಾಗೂ ಸಾರ್ವಜನಿಕ ದೇಣಿಗೆಗೆ ಮನವಿ

varthajala
0

 ಬೆಂಗಳೂರು : ಕರ್ನಾಟಕವನ್ನು ಬಾಲ ಹಾಗೂ ಕಿಶೋರ ಕಾರ್ಮಿಕ ಮುಕ್ತ ರಾಜ್ಯವನ್ನಾಗಿಸುವ ನಿಟ್ಟಿನಲ್ಲಿ ಸರ್ಕಾರವು ಮಹತ್ವದ ಹೆಜ್ಜೆಯನ್ನಿಟ್ಟಿದೆ. ಈ ಗುರಿಯನ್ನು ಸಾಧಿಸಲು ಕಾರ್ಮಿಕ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ “ಕರ್ನಾಟಕ ರಾಜ್ಯ ಬಾಲ ಕಾರ್ಮಿಕ ನಿರ್ಮೂಲನಾ ಯೋಜನಾ ಸೊಸೈಟಿ”ಯ ಹೆಸರನ್ನು ಇಂದಿನಿಂದ ಜಾರಿಗೆ ಬರುವಂತೆ “ಕರ್ನಾಟಕ ರಾಜ್ಯ ಬಾಲ ಹಾಗೂ ಕಿಶೋರ ಕಾರ್ಮಿಕ ಪದ್ಧತಿ ನಿರ್ಮೂಲನಾ ಯೋಜನಾ ಸೊಸೈಟಿ” ಎಂದು ಮರುನಾಮಕರಣ ಮಾಡಲಾಗಿದೆ.ಬಾಲ ಹಾಗೂ ಕಿಶೋರ ಕಾರ್ಮಿಕ (ನಿμÉೀಧ ಮತ್ತು ನಿಯಂತ್ರಣ) ಕಾಯ್ದೆ 1986 ಮತ್ತು ತಿದ್ದುಪಡಿ ನಿಯಮಗಳು 2017ರ ಅಡಿಯಲ್ಲಿ ರಾಜ್ಯಾದ್ಯಂತ ಕಟ್ಟುನಿಟ್ಟಿನ ತಪಾಸಣೆ ಮತ್ತು ರಕ್ಷಣಾ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ.

ಪುನರ್ವಸತಿ ಮತ್ತು ಕಲ್ಯಾಣ: ರಕ್ಷಿಸಲ್ಪಟ್ಟ ಬಾಲಕಾರ್ಮಿಕರಿಗೆ ಶೈಕ್ಷಣಿಕ ಕಿಟ್ ವಿತರಣೆ, ಪುನರ್ವಸತಿ ಮತ್ತು ಅವರ ಜೀವನದ ಸುಧಾರಣೆಗಾಗಿ ಇಲಾಖೆಯು ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.ಜಾಗೃತಿ ಮತ್ತು ಪೆÇ್ರೀತ್ಸಾಹ: ಬಾಲ ಕಾರ್ಮಿಕರ ಬಗ್ಗೆ ಮಾಹಿತಿ ನೀಡಿ ಪ್ರಕರಣ ಸಾಬೀತಾದಲ್ಲಿ ಅಂತಹ ಮಾಹಿತಿ ನೀಡಿದವರಿಗೆ ಪೆÇ್ರೀತ್ಸಾಹಧನ ನೀಡುವ ಯೋಜನೆಯೂ ಜಾರಿಯಲ್ಲಿದೆ.

ಸಾರ್ವಜನಿಕರಿಗೆ ಮತ್ತು ಉದ್ದಿಮೆದಾರರಿಗೆ ಮನವಿ:ಬಾಲ ಕಾರ್ಮಿಕರ ಪುನರ್ವಸತಿ ಮತ್ತು ಸಾಮಾಜಿಕ ಸೇವಾ ಕಾರ್ಯಗಳಿಗೆ ನೆರವಾಗಲು ಇಚ್ಛಿಸುವ ಕೈಗಾರಿಕೆಗಳು, ಅಂಗಡಿ-ವಾಣಿಜ್ಯ ಸಂಸ್ಥೆಗಳು ಮತ್ತು ಸಾರ್ವಜನಿಕರು ಕರ್ನಾಟಕ ರಾಜ್ಯ ಬಾಲಕಾರ್ಮಿಕ ನಿರ್ಮೂಲನಾ ಯೋಜನಾ ಸೊಸೈಟಿಯ ಕೆನರಾ ಬ್ಯಾಂಕ್ ನ ಖಾತೆ ಸಂಖ್ಯೆ 110058103941, ಐ.ಎಫ್.ಎಸ್.ಸಿ ಕೋಡ್: CNRB0007295 ಬೆಂಗಳೂರು ವರ್ಕರ್ಸ್ ವೆಲ್ಫೇರ್ ಬೋರ್ಡ್ ಶಾಖೆಯ ಖಾತೆಗೆ ದೇಣಿಗೆ ನೀಡುವ ಮೂಲಕ ಸಹಕರಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಡೈರಿ ಸರ್ಕಲ್, ಬನ್ನೇರುಘಟ್ಟ ರಸ್ತೆಯಲ್ಲಿರುವ ಇಲಾಖೆಯ ಕಚೇರಿಯನ್ನು ಅಥವಾ ದೂರವಾಣಿ ಸಂಖ್ಯೆ 080-29752833 ಅನ್ನು ಸಂಪರ್ಕಿಸಬಹುದು ಎಂದು ಕಾರ್ಮಿಕ ಇಲಾಖೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Post a Comment

0Comments

Post a Comment (0)