ಹಿರಿಯ ಪತ್ರಕರ್ತ ಕೆ.ವಿ.ಶ್ರೀನಿವಾಸನ್ ನಿಧನಕ್ಕೆ - ಮುಖ್ಯಮಂತ್ರಿ ಸಂತಾಪ
February 08, 2026
0
ಬೆಂಗಳೂರು, ಫೆಬ್ರವರಿ 07 (ಕರ್ನಾಟಕ ವಾರ್ತೆ):
ನಾಡಿನ ಹಿರಿಯ ಪತ್ರಕರ್ತ, ಪತ್ರಿಕಾ ವಲಯದಲ್ಲಿ 'ಬ್ರದರ್' ಎಂದೇ ಕರೆಯಲ್ಪಡುತ್ತಿದ್ದ ಗಾಂಧಿವಾದಿ ಹೋರಾಟಗಾರರೂ ಆದ ಕೆ.ವಿ.ಶ್ರೀನಿವಾಸನ್ ಅವರ ನಿಧನದಿಂದ ದುಃಖಿತನಾಗಿದ್ದೇನೆ.
ಹುಣಸೂರು ಸಮೀಪದ ಕಲ್ಕುಣಿಕೆ ಗ್ರಾಮದವರಾದ ಶ್ರೀನಿವಾಸನ್ ಸರಳ ನಡೆ, ನುಡಿ, ಪ್ರಾಮಾಣಿಕತೆ ಮತ್ತು ವೃತ್ತಿ ಬದ್ಧತೆಯಿಂದ ಜನಾನುರಾಗಿಯಾಗಿದ್ದರು. ಸುದೀರ್ಘಕಾಲ ಮಾಧ್ಯಮರಂಗದಲ್ಲಿ ಸೇವೆ ಸಲ್ಲಿಸಿ ಇತ್ತೀಚೆಗೆ ವಿಶ್ರಾಂತ ಜೀವನ ನಡೆಸುತ್ತಿದ್ದರು. ಹಲವಾರು ಪತ್ರಕರ್ತರನ್ನು ರೂಪಿಸಿದ ಹಿರಿಮೆ ಅವರದ್ದಾಗಿತ್ತು.
ಮೈಸೂರಿನ ನಾರಾಯಣ ಶಾಸ್ತ್ರಿ ರಸ್ತೆಯ ಅನಾಥಾಲಯದಲ್ಲಿ ನಾಲ್ಕು ದಶಕಗಳ ಕಾಲ ಬಾಡಿಗೆ ಕೋಣೆಯಲ್ಲಿ ವಾಸಿಸುತ್ತಾ, ವೃತ್ತಿಜೀವನ ಸಾಗಿಸಿದ್ದು ಅವರ ಪ್ರಾಮಾಣಿಕತೆ ಮತ್ತು ದಕ್ಷತೆಗೆ ಹಿಡಿದ ಕನ್ನಡಿ.
ಆತ್ಮೀಯರಾಗಿದ್ದ ಶ್ರೀನಿವಾಸನ್ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ. ಅವರ ಕುಟುಂಬ ವರ್ಗದವರಿಗೆ ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಸಂತಾಪವನ್ನು ವ್ಯಕ್ತಪಡಿಸಿದ್ದಾರೆ.