ಹಿರಿಯ ಪತ್ರಕರ್ತ ಹಾಗೂ ವಿಧಾನ ಪರಿಷತ್ತಿನ ಮಾಜಿ ಸದಸ್ಯರಾದ ಪಿ.ರಾಮಯ್ಯ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ

varthajala
0

 ಬೆಂಗಳೂರು : ಹಿರಿಯ ಪತ್ರಕರ್ತ ಹಾಗೂ ವಿಧಾನ ಪರಿಷತ್ತಿನ ಮಾಜಿ ಸದಸ್ಯರಾದ ಪಿ.ರಾಮಯ್ಯ ಅವರ ನಿಧನದಿಂದ ದು:ಖಿತನಾಗಿದ್ದೇನೆ.‘ದಿ ಹಿಂದೂ' ಪತ್ರಿಕೆಯಲ್ಲಿ ಐದು ದಶಕಗಳಿಗಿಂತ ಹೆಚ್ಚು ಕಾಲ ಸೇವೆ ಸಲ್ಲಿಸಿದ್ದ ರಾಮಯ್ಯ ಅವರು ನನ್ನ ಹಿತಚಿಂತಕರಾಗಿದ್ದರು.


ಪತ್ರಕರ್ತರಾಗಿ ಸದಾ ರಾಜ್ಯದ ಹಿತಕ್ಕಾಗಿ ಕೆಲಸ ಮಾಡಿದ್ದ ರಾಮಯ್ಯ ಅವರಲ್ಲಿದ್ದ ರಾಜಕೀಯ, ಇತಿಹಾಸ, ಸಂಸ್ಕøತಿ ಮತ್ತು ಸಾಮಾಜಿಕ ವಿದ್ಯಮಾನಗಳ ಜ್ಞಾನ-ಅನುಭವ ಬೆರಗುಗೊಳಿಸುತಿತ್ತು. 
ವಿಧಾನ ಪರಿಷತ್ ಸದಸ್ಯರಾಗಿಯೂ ಅವರು ಪರಿಣಾಮಕಾರಿಯಾಗಿ ಕೆಲಸ ಮಾಡಿದ್ದರು. ಸಣ್ಣ ಪತ್ರಿಕೆಗಳ ಸಮಸ್ಯೆಗಳ ಅಧ್ಯಯನಕ್ಕಾಗಿ ರಚಿಸಲಾಗಿದ್ದ ಸಮಿತಿಯ ಅಧ್ಯಕ್ಷರಾಗಿ ಸಣ್ಣ ಪತ್ರಿಕೆಗಳ ಸಮಸ್ಯೆಗೆ ಪರಿಹಾರ ದೊರಕಿಸಿಕೊಡಲು ಶ್ರಮಿಸಿದ್ದರು.
ರಾಮಯ್ಯ ಅವರ ಆತ್ಮಕ್ಕೆ ಚಿರಶಾಂತಿಯನ್ನು ನೀಡಲಿ ಹಾಗೂ ಅವರ ಅಗಲಿಯಿಂದ ಕುಟುಂಬದ ಸದಸ್ಯರ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ತಮ್ಮ 'ಎಕ್ಸ್' ಖಾತೆಯಲ್ಲಿ ಸಂತಾಪ ವ್ಯಕ್ತಪಡಿಸಿದ್ದಾರೆ.

Post a Comment

0Comments

Post a Comment (0)