ಆಯವ್ಯಯದ ದಿನಾಂಕ ಸದ್ಯದಲ್ಲಿಯೇ ನಿಗದಿ- ಮುಖ್ಯಮಂತ್ರಿ ಸಿದ್ದರಾಮಯ್ಯ

varthajala
0

 ಬೆಂಗಳೂರು : 2026-27 ನೇ ಸಾಲಿನ ಆಯವ್ಯಯ ಮಂಡನೆಯ ದಿನಾಂಕವನ್ನು ಸದ್ಯದಲ್ಲಿಯೇ ನಿಗದಿಪಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡುತ್ತಾ, ವಿವಿಧ ಇಲಾಖೆಗಳೊಂದಿಗೆ ಸಭೆಗಳನ್ನು ನಡೆಸಲಾಗುತ್ತಿದೆ.

ಸಭೆಗಳು ಮುಗಿದ ನಂತರ ದಿನಾಂಕ ನಿಗದಿಪಡಿಸಲಾಗುವುದು ಎಂದು ಹೇಳಿದರು.ಶಾಸಕರು ವಿದೇಶ ಪ್ರವಾಸ ಕೈಗೊಳ್ಳುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಎಂಎಲ್‍ಎಗಳು ಮತ್ತು ಎಂಎಲ್‍ಸಿಗಳು ತಮ್ಮ ಸ್ವಂತ ಖರ್ಚಿನಲ್ಲಿ ವಿದೇಶ ಪ್ರವಾಸ ಕೈಗೊಳ್ಳುತ್ತಿದ್ದಾರೆ ಎಂದರು.ಪತ್ರಕರ್ತರು ನಾಯಕತ್ವ ಬದಲಾವಣೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ, ಪತ್ರಕರ್ತರು ಪದೇ ಪದೇ ಒಂದೇ ವಿಷಯವನ್ನು ಕೇಳಬಾರದು. ನಾಯಕತ್ವ ಬದಲಾವಣೆ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನಿಸಿದರೆ ಅದರಂತೆ ನಾನು ಮತ್ತು ಉಪಮುಖ್ಯಮಂತ್ರಿಗಳಿಬ್ಬರೂ ನಡೆದುಕೊಳ್ಳುತ್ತೇವೆ ಎಂದರು.

Post a Comment

0Comments

Post a Comment (0)