ವಿಧಾನಸಭೆಯಲ್ಲಿ “ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯ್ದೆ" (MGNREGA) ಮರು ಸ್ಥಾಪಿಸುವಂತೆ ಮುಖ್ಯಮಂತ್ರಿಗಳು ಮಂಡಿಸಿದ ನಿರ್ಣಯಕ್ಕೆ ಶಾಸಕರ ಬೆಂಬಲ

varthajala
0

 ಬೆಂಗಳೂರು : ಮುಖ್ಯಮಂತ್ರಿಗಳು ಮಂಡಿಸಿದ ಕರ್ನಾಟಕ ರಾಜ್ಯದ ಗ್ರಾಮೀಣ ಜನರ ಬದುಕಿನ ಹಕ್ಕನ್ನು ಕಾಪಾಡುವ ದೃಷ್ಟಿಯಿಂದ, ಒಕ್ಕೂಟ ತತ್ವಕ್ಕೆ ವಿರೋಧವಾಗಿರುವ ಮತ್ತು ರಾಜ್ಯದ ಬೊಕ್ಕಸಕ್ಕೆ ತೀವ್ರ ಹೊರೆ ಉಂಟುಮಾಡುವ ಮತ್ತು ವಿಕೇಂದ್ರೀಕರಣ ತತ್ವಕ್ಕೆ ವಿರುದ್ಧವಾಗಿರುವ ಗ್ರಾಮ ಪಂಚಾಯಿತಿಗಳ ಅಧಿಕಾರ ಮತ್ತು ಹಕ್ಕುಗಳನ್ನು ಕಸಿದುಕೊಂಡಿರುವ ವಿಕಸಿತ್ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ) (VB-GRAM-G) ಕಾಯ್ದೆಯನ್ನು ಕೇಂದ್ರ ಸರ್ಕಾರವು ತಕ್ಷಣವೇ ರದ್ದುಗೊಳಿಸಬೇಕು ಹಾಗೂ ಗ್ರಾಮೀಣ ಆಸ್ತಿ ಸೃಜನೆಗೆ ಮತ್ತು ಬಡವರ ಸ್ವಾವಲಂಬನೆಗೆ ಕಾರಣವಾಗಿದ್ದ “ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯ್ದೆಯನ್ನು (MGNREGA) ಈ ಹಿಂದಿನಂತೆ ಅದರ ಮೂಲ ಸ್ವರೂಪದಲ್ಲಿಯೇ ಮರುಸ್ಥಾಪಿಸಬೇಕು ನಿರ್ಣಯಕ್ಕೆ ಬೆಂಬಲ ವ್ಯಕ್ತಪಡಿಸಿ ಶಾಸಕರುಗಳು ಮಾತನಾಡಿದರು.

Post a Comment

0Comments

Post a Comment (0)